ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು. ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ. ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ರಾಜ್ಯದ ಒಳಗಿನ ಜಿಹಾದಿ ಮನಃಸ್ಥಿತಿ ಇರೋ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ ಎಂದು ಒಂದು ಸಮುದಾಯವನ್ನ ಗುರಿಯಾಗಿಸಿ ಪರೋಕ್ಷವಾಗಿ ಶ್ರೀರಾಮುಲು ಅವರು ವಾಗ್ದಾಳಿಯನ್ನ ನಡೆಸಿದ್ದಾರೆ.
ಇನ್ನು ಮೃತ ವೇಣುಗೋಪಾಲ್ ಕುರಿತು ಮಾತನಾಡಿದ ಶ್ರೀರಾಮುಲು, ಮೃತ ವೇಣುಗೋಪಾಲ್ ಕುಟುಂಬದ ಕಥೆ ಏನು? ಅವರ ಮಕ್ಕಳಿಗೆ ಯಾರು ದಿಕ್ಕು? ವೇಣುಗೋಪಾಲ ನಾಯಕ ಕೊಲೆ ಪೂರ್ವ ನಿಯೋಜಿತ ಕೊಲೆ. ಈತನ ಸಾವಿಗೆ ನ್ಯಾಯ ಸಿಗಲೇ ಬೇಕು ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದಾರೆ
ಇದರ ಜೊತೆಗೆ ಮತ್ತೆ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಜಿಹಾದಿ ಮನಃಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ. ಕಾಂಗ್ರೆಸ್ ನವರಿಗೆ ಅಧಿಕಾರದ ಅಹಂ ಜಾಸ್ತಿಯಾಗಿದೆ. ಸುಳ್ಳಿನ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದವರು ವೈಯಕ್ತಿಕ ವರ್ಚಸ್ಸಿನಿಂದ ಬಂದ ರೀತಿ ಮಾತಾನಾಡುತ್ತಿದ್ದಾರೆ. ವೇಣುಗೋಪಾಲ ನಾಯಕ ಹತ್ಯೆ ನಂತರ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಮಂತ್ರಿ ಮಾಡಿಲ್ಲ
ಸಿಎಂ ಸಮೇತ ಎಲ್ಲರು ಕಣ್ಮುಂಚಿ ಕುಳಿತಿದ್ದಾರೆ. ಹಿಂದೂ ಕಾರ್ಯಕರ್ತರು ಮೇಲೆ ಈ ರೀತಿ ಘಟನಾವಳಿಗಳು ಮೇಲಿಂದ ಮೇಲೆ ನಡೆಯುತ್ತವೆ. ಎಲ್ಲರೂ ಸ್ವಲ್ಪ ಜಾಗರೂಕರಾಗಿರಿ. ಶವದ ಮೇಲೆ ಬಿಜೆಪಿ ಯಾವತ್ತೂ ರಾಜಕೀಯ ಮಾಡಿಲ್ಲ. ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಯಾದಾಗ ಅವರ ವಿರುದ್ದ ಧ್ವನಿ ಎತ್ತುವುದು ನಮ್ಮ ಜವಾಬ್ದಾರಿ. ಪೋಲಿಸ್ ತನಿಖೆಗೆ ಒತ್ತಡಗಳು ಉಂಟಾಗುವ ಅನುಮಾನ ನಮಗೆ ಇದೆ. ಅದ್ದರಿಂದ ಸಿಬಿಐ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಶ್ರೀರಾಮುಲು ಹೇಳಿದರು