ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ ರಹಸ್ತ ಎಂಬ ಕಿರುಚಿತ್ರ ಮಾಡಿದ್ದ ಇಕ್ಷ್ವಾಕು ರಾಮ್ ಈಗ ‘Everything Is Possible’ ಎಂಬ ಕ್ಯಾಚಿ ಟೈಟಲ್ ನಡಿ ಸೈನ್ಸ್ ಫಿಕ್ಷನ್ ಕಿರುಚಿತ್ರ ಮಾಡಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ಹಾಗೂ ಎಂಕೆ ಮಠ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.
ನಾಯಕಿ ಖುಷಿ ರವಿ ಮಾತಾನಾಡಿ, ಸೈನ್ಸ್ ಫಿಕ್ಷನ್ ಜಾನರ್ ಸಿನಿಮಾವಿದು. ಸೆಕೆಂಡ್ ಲಾಕ್ ಡೌನ್ ಟೈಮ್ ನಲ್ಲಿ ಬಂದು ನಿರ್ದೇಶಕರು ಕಥೆ ಹೇಳಿದರು. ಇದೊಂದು ಶಾರ್ಟ್ ಮೂವೀ. ತುಂಬಾ ಅದ್ಭುತ ಕಾನ್ಸೆಪ್ಟ್ ಇವತ್ತಿನಿಂದ ನಮ್ಮ ಫ್ಲಿಕ್ಸ್ ಹಾಗೂ ಪ್ರೈಮ್ ವಿಡಿಯೋದಲ್ಲಿ ಶಾರ್ಟ್ ಮೂವೀ ಸ್ಟ್ರೀಮ್ ಆಗ್ತಿದೆ. ಪ್ರತಿಯೊಬ್ಬರು ನೋಡಿ ಬೆಂಬಲಿಸಿ ಎಂದು ವಿನಂತಿಸಿದ್ದಾರೆ.
ಪಿಎಂಕೆ ಪ್ರೊಡಕ್ಷನ್ ನಡಿ ನಿರ್ಮಾಣವಾಗಿರುವ ‘Everything Is Possible’ ಕಿರುಚಿತ್ರಕ್ಕೆ ಪೂರ್ಣಿಮಾ ಮನೋಜ್, ಯಶ್ವಿಕ್ ನಿರ್ಮಾಣ ಮಾಡಿದ್ದು, ಎರಿಕ್ ವಿಜೆ ಛಾಯಾಗ್ರಾಹಣ ಜೊತೆಗೆ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಸ್ವಾಮಿನಾಥನ್ ಆರ್ ಕೆ ಸಂಗೀತ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಸಿನಿಮಾಕ್ಕಿದ್ದು, ನಮ್ಮ ಫ್ಲಿಕ್ಸ್, ಅಮೇಜಾನ್, airtel xstream ಒಟಿಟಿಯಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿದೆ.