• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಬರುತ್ತೆ!: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 26, 2021
in ಕರ್ನಾಟಕ, ರಾಜಕೀಯ
0
ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜ್ವರ ಬರುತ್ತೆ!: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಪ್ರತಿ ಬಾರಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಜೆಡಿಎಸ್‌ ಜ್ವರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ದ ಟೀಕಾಪ್ರಹಾರ ನಡೆಸಿದ್ದಾರೆ.

ADVERTISEMENT

 “ಯಾವ ಚುನಾವಣೆಯೇ ಬರಲಿ, ಕಾಂಗ್ರೆಸ್‌ ನಾಯಕರಿಗೆ ತಕ್ಷಣ ನೆನಪಾಗುವುದು ಜೆಡಿಎಸ್‌ ಪಕ್ಷ ಮಾತ್ರ. ಜೆಡಿಎಸ್‌-ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆ ಪಕ್ಷದ ನಾಯಕರು  ಹೇಳುತ್ತಾರೆ. ಆ ಚುನಾವಣೆ ಮುಗಿದ ಮೇಲೆ ಆ ವಿಷಯವನ್ನು ಅಲ್ಲಿಯೇ ಕೈಬಿಡುತ್ತಾರೆ. ಅವರು ಪದೇಪದೆ ಯಾಕೆ ಈ ರೀತಿಯ ಅಪಪ್ರಚಾರ ನಡೆಸುತ್ತಿದ್ದಾರೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಒಂದು ವೇಳೆ ನಮ್ಮ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಿದ್ದರೆ ಜೆಡಿಎಸ್‌ ಸ್ಪರ್ಧೆ ಮಾಡಿರುವ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತಿತ್ತೇ? ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ಮತಗಳೇ ಇಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಲಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸಬೇಕು ಎಂದು ಬಿಜೆಪಿ ನಾಯಕರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಕೂಡ ಯತ್ನಿಸುತ್ತಿದೆ. ಹೀಗಿದ್ದರೂ ಕಾಂಗ್ರೆಸ್‌ ನಾಯಕರು ವಿನಾಕಾರಣ ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಳ ಒಪ್ಪಂದ ಎಂದರೆ ಇದು!:

ಕಳೆದ ಲೋಕಸಭೆ ಚುನಾವಣೆ ವೇಳೆ ಹಾಸನದಲ್ಲಿ ಕಾಂಗ್ರೆಸ್‌ ಸರಕಾರದಲ್ಲಿ ಮಂತ್ರಿಯಾಗಿದ್ದ ನಾಯಕನನ್ನು ಬಿಜೆಪಿಗೆ ಕಳಿಸಿ ಅಭ್ಯರ್ಥಿಯನ್ನಾಗಿ ಮಾಡಿಸುತ್ತಾರೆ. ಈಗ ಅದೇ ನಾಯಕನ ಪುತ್ರ ಕೊಡಗಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈಗ ಇಲ್ಲಿ ಅಪ್ಪ ಬಿಜೆಪಿ ಪಾರ್ಟಿ, ಮಗ ಕಾಂಗ್ರೆಸ್‌ ಪಾರ್ಟಿ! ಇದೇನು ಒಪ್ಪಂದ? ಜನರಿಗೆ ಎಲ್ಲವೂ ಚೆನ್ನಾಗಿ ಅರ್ಥವಾಗುತ್ತಿದೆ. ನಿಜಕ್ಕೂ ಒಳ ಒಪ್ಪಂದ ಎಂದರೆ ಇದೇ ಎಂದು ಹೇಳಿದ್ದಾರೆ.

ಬಿಜೆಪಿ ಸರಕಾರದ ಮಂತ್ರಿಯೊಬ್ಬರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವ್ಯಕ್ತಿಗೆ ಮಂಡ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿದೆ. ಒಳ ಒಪ್ಪಂದ ಜೆಡಿಎಸ್-ಬಿಜೆಪಿ ನಡುವೆ ಆಗಿದೆಯೋ ಅಥವಾ ಕಾಂಗ್ರೆಸ್-ಬಿಜೆಪಿ ನಡುವೆ ಆಗಿದೆಯೋ? ಎನ್ನುವುದನ್ನು ಜನತೆಯೇ ತೀರ್ಮಾನ ಮಾಡಲಿ. ಇನ್ನಾದರೂ ಕಾಂಗ್ರೆಸ್‌ ಪಕ್ಷದ ನಾಯಕರು ಜೆಡಿಎಸ್‌ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಕಳೆದ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದರು. ಆದರೆ, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷದ ನಾಯಕರು ನಮ್ಮ ಪಕ್ಷದ ವಿರುದ್ಧ ಕುತಂತ್ರಗಳನ್ನು ಹೂಡುತ್ತಲೇ ಇದ್ದಾರೆ. ಈ ಚುನಾವಣೆಯಲ್ಲಿ ಇಂಥ ಕುತಂತ್ರಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಲ ಸ್ಪರ್ಧೆ ಮಾಡಿರುವ ಜೆಡಿಎಸ್‌ ಅಭ್ಯರ್ಥಿ ವಕ್ಕಲೇರಿ ರಾಮು ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ, ಅನುಕಂಪವೂ ಇದೆ. ಅವರು ಸಮರ್ಥ ಅಭ್ಯರ್ಥಿಯಾಗಿದ್ದು, ಖಂಡಿತಾ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ; ನಾಳೆ ನಾನು ಪುನಃ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ:

ಕಳೆದ ಅನೇಕ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗಿ ಜನರು ಅತೀವ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳ ನೆರೆ ವೀಕ್ಷಣೆ ಹೇಗಿದೆ ಎಂದರೆ, ಬಂದ ಪುಟ್ಟಾ.. ಹೋದ ಪುಟ್ಟಾ ಎನ್ನುವಂತಿದೆ. ಹಿಂದೆ ನೆರೆ ಬಂದಾಗಲೇ ಮನೆ ಕಳೆದುಕೊಂಡವರಿಗೆ, ಬೆಳೆ ನಷ್ಟವಾದರಿಗೆ ಇನ್ನೂ ಪರಿಹಾರ ನೀಡಿಲ್ಲ. ಈಗ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ಕೋಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆಯೇ ಘೋಷಣೆ ಮಾಡಿದ್ದ ಹಣವನ್ನೇ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಬಿಡುಗಡೆ ಮಾಡುತ್ತೆ ಅನ್ನುವುದಕ್ಕೆ ಖಾತ್ರಿ ಏನಿದೆ? ಈ ಸರಕಾರ ಬರೀ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

“ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನರ ಬವಣೆ ಬಗ್ಗೆ ಗೊತ್ತಿಲ್ಲ. ಅವರು ಆಕಾಶದಲ್ಲಿದ್ದಾರೆ. ಅವರ ಬಗ್ಗೆ ನನಗೆ ಎಲ್ಲ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಅವರ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ಇವರೆಲ್ಲಾ ಹಣದ ಮೂಲಕ ಏನನ್ನಾದರೂ ಸಾಧಿಸಬಹುದು ಎಂದು ಭಾವಿಸಿದ್ದಾರೆ. ಇವತ್ತು ಹಣ ಮಾಡಿಟ್ಟರೆ, ಚುನಾವಣೆ ಬಂದಾಗ ಹಣ ಹಂಚಿ ಜನರನ್ನು ಕೊಂಡುಕೊಳ್ಳಬಹುದು ಎಂದು ಅವರು ಭಾವಿಸಿದಂತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ-ಕೋಲಾರದ ಇದೇ ಜನವೇ ಹಣವನ್ನು ಧಿಕ್ಕರಿಸಿ ಹಣ ಬಲಕ್ಕಿಂತ ಜನ ಬಲವೇ ದೊಡ್ಡದು ಎಂದು ಸಾಬೀತು ಮಾಡಲಿದ್ದಾರೆ” ಎಂದರು.

ಮಳೆಯಿಂದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಭಾರೀ ಹಾನಿಯಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷ ನಾಯಕರು ಭೇಟಿ ನೀಡಿದ್ದಾರೆ. ಬರೀ ಭೇಟಿ ನೀಡಿದರೆ ಸಾಲದು, ಸರಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಕೇವಲ ಎನ್ಡಿಆರ್ಎಫ್ ಅಥವಾ ಎಸ್ಟಿಆರ್ಎಫ್ ನಿಯಮಗಳನ್ನು ಹೇಳುತ್ತಾ ಕೂತರೆ ಪ್ರಯೋಜನವಿಲ್ಲ. ಅಲ್ಪ ಪ್ರಮಾಣದ ಪರಿಹಾರದಿಂದ ಜನರಿಗೇನು ಉಪಯೋಗ ಎಂದು ಪ್ರಶ್ನಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಟ್ ಕಾಯಿನ್ ಮಾಸ್ಟರ್ ಮೈಂಡ್ ಶ್ರೀಕಿ ಅಲ್ಲವೇ ಅಲ್ಲ; ಮತ್ಯಾರು?- ಕೇಸ್ ಶುರುವಾಗಿದ್ದು ಎಲ್ಲಿಂದ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Next Post

ಸುಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಬಿಎಂಪಿಯ ಅಣುಕು ಶವ ಸಂಸ್ಕಾರ!

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
ಸುಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಬಿಎಂಪಿಯ ಅಣುಕು ಶವ ಸಂಸ್ಕಾರ!

ಸುಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಬಿಎಂಪಿಯ ಅಣುಕು ಶವ ಸಂಸ್ಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada