
ಬೆಂಗಳೂರು: “ಎಲ್ಲಿಯವರೆಗೆ ಇವಿಎಂ ಇರುತ್ತದೆಯೋ ಅಲ್ಲಿಯವರೆಗೆ ಬಿಜೆಪಿಯೇ ಗೆಲ್ಲುತ್ತಿರುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ. ಹ್ಯಾಕ್ ಮಾಡು ವುದರಲ್ಲಿ ಬಿಜೆಪಿಗರು ನಿಪುಣರು. ಈ ಸಂಬಂಧ ಕೇಂದ್ರ ಚುನಾವಣ ಆಯೋ ಗದ ಕದ ತಟ್ಟಲು ತೀರ್ಮಾನಿಸಿದ್ದೇವೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್ ತಿಳಿಸಿದರು.

ಮಹಾರಾಷ್ಟ್ರ ಚುನಾವಣೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರೂ ಆಗಿರುವ ಪರಮೇಶ್ವರ ಅವರು, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ಪಕ್ಷದ ನಾಯಕರು ಇವಿಎಂ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನ ಸಭಾ ಚುನಾವಣ ಫಲಿತಾಂಶವು ಇವಿಎಂ ವ್ಯವಸ್ಥೆಯನ್ನು ಅನುಮಾನದಿಂದ ನೋಡು ವಂತೆ ಮಾಡಿದೆ.ನಮ್ಮ ನಿರೀಕ್ಷೆಗಳೆಲ್ಲವೂ ಉಲ್ಟಾ ಆಗಿವೆ. ಇವಿಎಂಗಳನ್ನು ಅತ್ಯಂತ ಕೌಶಲದಿಂದ ನಿಯಂತ್ರಣ ಮಾಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿ ದರು.ಈ ಕಾರಣಕ್ಕಾಗಿಯೇ ನಾವು ಬ್ಯಾಲೆಟ್ ಪೇಪರ್ ಮರಳಿ ತರಬೇಕೆಂದು ಮನವಿ ಮಾಡುತ್ತಿದ್ದೇವೆ.ಆದರೆ ಚುನಾವಣ ಆಯೋಗ ಇದನ್ನು ನಿರಾಕರಿಸುತ್ತಲೇ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.