• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ತಮಿಳುನಾಡಿಗೆ ಕಾವೇರಿ | ಡಿಕೆಶಿ ನಿರ್ಧಾರಕ್ಕೆ ಬೊಮ್ಮಾಯಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಾವೇರಿ
Share on WhatsAppShare on FacebookShare on Telegram

ತಮಿಳುನಾಡು ರಾಜ್ಯಕ್ಕೆ ಕಾವೇರಿ ನದಿಯ ನೀರು ಹರಿಸುವುದಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ADVERTISEMENT

ಈ ಬಗ್ಗೆ ಬುಧವಾರ (ಆಗಸ್ಟ್ 16) ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು ಡಿ.ಕೆ.ಶಿವಕುಮಾರ್‌ ಅವರಿಗೆ ನಿರ್ಧಾರ ಬದಲಿಸುವಂತೆ ಮನವಿ ಮಾಡಿದ್ದಾರೆ.

“ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ಕಾವೇರಿ ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲ್ಯುಎಂಎ ಸಭೆಯಲ್ಲಿ ಪ್ರತಿಭಟಿಸಲಿಲ್ಲ. ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಡಿರುವುದು ಅಕ್ಷಮ್ಯ” ಎಂದು ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ.
1/4

— Basavaraj S Bommai (Modi Ka Parivar) (@BSBommai) August 16, 2023

“ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಅಣೆಕಟ್ಟಿನಲ್ಲಿ ಶೇಖರಿಸಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿಯನ್ನು ನೀವು ತಂದೊಡ್ಡಿದ್ದೀರಿ” ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ.
2/4

— Basavaraj S Bommai (Modi Ka Parivar) (@BSBommai) August 16, 2023

ಸಿಎಂ @siddaramaiah ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ @DKShivakumar ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು, ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ.
3/4

— Basavaraj S Bommai (Modi Ka Parivar) (@BSBommai) August 16, 2023

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು.
4/4

— Basavaraj S Bommai (Modi Ka Parivar) (@BSBommai) August 16, 2023

“ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಯ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಉಪಮುಖ್ಯಮಂತ್ರಿ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿದೆ. ರಾಜ್ಯದಲ್ಲಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ. ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಕುಟುಕಿದರು.

“ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ: ಎಚ್.ಡಿ.ಕುಮಾರಸ್ವಾಮಿ

ಸದ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ರಾಜ್ಯಕ್ಕೆ ಕಾವೇರಿಯ ನೀರು ಹರಿಸಲು ಒಪ್ಪುವ ಜತೆಗೆ ಒಂದು ಷರತ್ತನ್ನು ವಿಧಿಸಿದ್ದಾರೆ. “ನಿಮಗೆ ನಾವು 10 ಟಿಎಂಸಿ ನೀರು ಹರಿಸುತ್ತೇವೆ. ಆದರೆ ನೀವು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬೆಳೆಗಳು ಬೆಳೆದು ನಿಂತಿದ್ದು, ನಿತ್ಯ 24000 ಕ್ಯೂಸೆಕ್ ನೀರು ಅಗತ್ಯವಾಗಿದೆ. ಆದ್ದರಿಂದ ಆ ಕಾವೇರಿ ನೀರನ್ನು ಕರ್ನಾಟಕ ಬಿಡಲು ಸೂಚನೆ ನೀಡಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

Tags: Basavaraj BommaiDKShivakumarKaveriKaveri RiverTamilnaduಕಾವೇರಿಡಿ.ಕೆ.ಶಿವಕುಮಾರ್ತಮಿಳುನಾಡುಬಸವರಾಜ ಬೊಮ್ಮಾಯಿ
Previous Post

ಮಂಗಳೂರು | ಸಮುದ್ರಕ್ಕೆ ಹಾರಿ ಪುತ್ರ ಆತ್ಮಹತ್ಯೆ, ಶೋಕದಲ್ಲಿ ತಂದೆಯೂ ಸಾವು

Next Post

‘ತತ್ಸಮ ತದ್ಭವ’ ಚಿತ್ರದಿಂದ ʼದೂರಿ ಲಾಲಿʼ ಚಾಲೆಂಜ್

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ತತ್ಸವ ತದ್ಭವ

‘ತತ್ಸಮ ತದ್ಭವ’ ಚಿತ್ರದಿಂದ ʼದೂರಿ ಲಾಲಿʼ ಚಾಲೆಂಜ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada