• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕು ಬರ ಘೋಷಣೆ ಮಾಡದಿದ್ದರೆ ಹೋರಾಟ: ಬಸವರಾಜ ಬೊಮ್ಮಾಯಿ

Any Mind by Any Mind
October 7, 2023
in ಕರ್ನಾಟಕ
0
ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕು ಬರ ಘೋಷಣೆ ಮಾಡದಿದ್ದರೆ ಹೋರಾಟ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡಿತ್ತೇವೆ ಎಂದರೆ ಸಾಲದು, ತಕ್ಷಣ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಶಿಗ್ಗಾವಿಯಲ್ಲಿ ಇಂದು ಶಿಗ್ಗಾವಿ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲು ನಿರಂತರ ವಿಳಂಬ ಮಾಡುತ್ತ, ಸೆಪ್ಟಂಬರ್ ನಲ್ಲಿ 195 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಸೋಮವಾರ ಬರ ತಾಲೂಕುಗಳೆಂದು ಘೋಷಣೆ ಮಾಡದಿದ್ದರೆ ರೈತರ ಜೊತೆ ಹೋರಾಟ ನಡೆಸಲಾಗುವುದು. ಈಗಾಗಲೇ ಕಂದಾಯ ಸಚಿವರೊಂದಿಗೆ ಮಾತನಾಡಿದ್ದು, ಅವರು ಮಾನದಂಡಗಳನ್ನು ನೋಡಿ ಈ ತಿಂಗಳಾಂತ್ಯಕ್ಕೆ ಘೊಷಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ, ಬಿತ್ತಿದ ಬೆಳೆ ಬಾರದಿರುವುದು, ನೀರಿಲ್ಲದಿರುವುದನ್ನು ನೋಡಿ ಬರ ತಾಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿದ್ದೆನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬರ ತಾಲೂಕುಗಳೆಂದು ಘೋಷಣೆ ಮಾಡುವ ವಿಶ್ವಾಸ ಇದೆ. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ಧರೆ, ರೈತರೊಂದಿಗೆ ಸೇರಿ ಸೋಮವಾರದ ನಂತರ ಹೋರಾಟ ನಡೆಸಲಾಗುವುದು ಎಂದರು.

ತಕ್ಷಣ ಪರಿಹಾರ ನೀಡಿ

ಸರ್ಕಾರ ಕೇವಲ ಬರ ತಾಲೂಕುಗಳೆಂದು ಘೋಷಣೆ ಮಾಡಿದರೆ ಸಾಲದು. ಬರ ಪರಿಹಾರ, ಮೇವು,ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ರಾಜ್ಯ ಸರ್ಕಾರ ತಕ್ಷಣ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಕೇವಲ ಮಾತಿನಿಂದ ಬರ ಪರಿಹಾರ ಮಾಡಲು ಸಾಧ್ಯವಿಲ್ಲ.‌ಕೇಂದ್ರ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ 250 ಕೋಟಿ ರೂ. ಬಿಡಿಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ವಯಕ್ತಿಕ ಖಾತೆಯಲ್ಲಿ ಹದಿನೈದು ಒಪ್ಪತ್ತು ಕೋಟಿವರೂಪಾಯಿ ಹಣ ಇದೆ. ಸರ್ಕಾರ ಮನಸು ಮಾಡಿದರೆ ಮೊದಲು ರೈತರಿಗೆ ಬೆಳೆ ಪರಿಹಾರ ನೀಡಬೇಕು. ರೈತರು ಈಗಾಗಲೇ ಎರಡು ಬಾರಿ ಬಿತ್ತನೆ ಮಾಡಿ ನಷ್ಟ ಅನುಭವಿಸಿದ್ದಾನೆ. ಅವರಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಬರ ಅಧ್ಯಯನ, ಸಮೀಕ್ಷೆ ನಂತರ ನಡೆಯಲಿ. ಸರ್ಕಾರ ಪರಿಹಾರದ ಜೊತೆಗೆ ರೈತರು ಮಾಡಿರುವ ಅಲ್ಪಾವಧಿ ಹಾಗೂ ಮಧ್ಯಮಾವಧಿ ಸಾಲಗಳನ್ನು ದೀರ್ಘಾವಧಿ ಸಾಲಗಳಾಗಿ ಪರಿವರ್ತಿಸಬೇಕು. ಹಾಗೂ ತಕ್ಷಣ ಹೊಸ ಸಾಲ. ನೀಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಹಿಂದೆ ನಾವು ಅಧಿಕಾರ ನಡೆಸಿದಾಗ ಪ್ರವಾಹ ಬಂದಿತ್ತು. ಆಗ ನಾವು ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡಿ ತೋರಿಸಲಿಲ್ಲ ತಕ್ಷಣ 2500 ಕೋಟಿ ಪರಿ ಹಾರ ಬಿಡುಗಡೆ ಮಾಡಿ ಒಂದು ತಿಂಗಳಲ್ಲಿ ವಿತರಣೆ ಮಾಡಿದ್ದೇವು. ಕೇಂದ್ರದ ಮಾನದಂಡಗಳ ಪ್ರಕಾರ ಒಣ ಬೇಸಾಯಕ್ಕೆ 6 ಸಾವಿರ ರೂ. ಪರಿಹಾರ ಕೊಡುತ್ತಾರೆ. ನಾವು 13 ಸಾವಿರ ಪರಿಹಾರ ಕೊಟ್ಟಿದ್ದೇವು. ನೀರಾವರಿಗೆ 13 ಸಾವಿರ ಇತ್ತು ನಾವು 25 ಸಾವಿರ ಕೊಟ್ಟೆವು. ತೋಟಗಾರಿಕೆಗೆ 18 ಸಾವಿರ ಇತ್ತು ನಾವು 28 ಸಾವಿರ ಪರಿಹಾರ ಕೊಟ್ಟಿದ್ದೇವು. ಇದಕ್ಕೆ ಯಾವುದೇ ಮಾನದಂಡ ಅಡ್ಡಿ ಬರಲಿಲ್ಲ. ಪರಿಹಾರ ನೀಡಬೇಕು ಎನ್ನುವ ಮನಸ್ಸು ಇರಬೇಕು ಎಂದು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಕಿಡಿ!

Next Post

SC-ST ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಸರ್ಕಾರದಿಂದ ಉಪಸಮಿತಿ ರಚನೆ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಗುತ್ತಿಗೆ ಆಧಾರಿತ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

SC-ST ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಸರ್ಕಾರದಿಂದ ಉಪಸಮಿತಿ ರಚನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada