• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪ ಅವರನ್ನು ಆಪರೇಷನ್ ಕಮಲದ ರಾಯಭಾರಿಯಾಗಿ ನೇಮಿಸುತ್ತಿರಾ? : ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
July 4, 2022
in ಕರ್ನಾಟಕ, ರಾಜಕೀಯ
0
ಯಡಿಯೂರಪ್ಪ ಅವರನ್ನು ಆಪರೇಷನ್ ಕಮಲದ ರಾಯಭಾರಿಯಾಗಿ ನೇಮಿಸುತ್ತಿರಾ? : ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ
Share on WhatsAppShare on FacebookShare on Telegram

ಆಪರೇಷನ್ ದಕ್ಷಿಣ್ ಎಂಬ ಸ್ಲೋಗನ್ ಮೂಲಕ ಬಿಜೆಪಿ ಪಕ್ಷವು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ಮೂಲೋತ್ಪಾಟನೆ ಮಾಡಿ, ಪ್ರತಿಪಕ್ಷ ಮತ್ತು ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ADVERTISEMENT

ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಆಪರೇಷನ್ ದಕ್ಷಿಣ್ ಹೆಸರಿನಲ್ಲಿ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಬಿಜೆಪಿ ಆಕ್ರಮಣಶೀಲತೆಯನ್ನು ಮಾಜಿ ಮುಖ್ಯಮಂತ್ರಿಗಳು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಮುಖ್ಯವಾಗಿ ಜೆಡಿಎಸ್ ಬಗ್ಗೆ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

ಜೆಡಿಎಸ್ʼನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ರವಿ ಅವರೇ, ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ ʼಸತ್ತಸೊಂಟʼದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಜೀ ಜೀ ಎನ್ನುತ್ತಾ ಜೀ ಹುಜೂರ್ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ್ಯ ಕೊಟ್ಟಿದ್ದೀರಿ?ಎಂದು ಎಂದು ಪ್ರಶ್ನಿಸಿದ್ದಾರೆ.

ಇದು ಬಿಜೆಪಿಯ ಹೊಸ ಸ್ಲೋಗನ್.!! ಹೈದರಾಬಾದ್ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾವನಾನ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು, ಜನರ ಮನಸ್ಸುಗಳನ್ನು ಒಡೆದು ʼರಾವಣ ರಾಜಕೀಯʼದ ವಿನಾಶಕಾರಿ ದಾರಿಗೆ ಹಿಡನ್ ಅಜೆಂಡಾ ಸಿದ್ಧ ಮಾಡಲಾಯಿತಾ? ಹೇಳಿ ಮಾನ್ಯ ಸಿ.ಟಿ.ರವಿ ಯವರೇ? ಎಂದು ವ್ಯಂಗ್ಯವಾಡಿದ್ದಾರೆ.

#ಆಪರೇಷನ್‌_ದಕ್ಷಿಣ್‌
ನೆಮ್ಮದಿಯ ಸಮಾಜಕ್ಕೆ ಕೋಮುವಿಷ ಪ್ರಾಶಣ ಮಾಡುವ ಇಂಜೆಕ್ಷನ್. ಧರ್ಮ, ದೇವರು, ಜಾತಿ, ಭಾಷೆ, ಆಚಾರ, ಆಹಾರ, ವ್ಯಾಪಾರಗಳನ್ನು ಎಳೆತಂದು, ಅಸಹಿಷ್ಣುತೆ ಸೃಷ್ಟಿಸಿ ಭಾರತವನ್ನು ಧರ್ಮದ ಆಧಾರದಲ್ಲಿ ಒಡೆದುಹಾಕುವುದಾ? ಕರ್ನಾಟಕದ ನಂತರ ನಿಮ್ಮ ಮುಂದಿನ ಗುರಿ ದಕ್ಷಿಣ ಭಾರತ. ಹೌದಲ್ಲವೇ @CTRavi_BJP ಯವರೇ? 3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 4, 2022

ನೆಮ್ಮದಿಯ ಸಮಾಜಕ್ಕೆ ಕೋಮುವಿಷ ಪ್ರಾಶಣ ಮಾಡುವ ಇಂಜೆಕ್ಷನ್. ಧರ್ಮ, ದೇವರು, ಜಾತಿ, ಭಾಷೆ, ಆಚಾರ, ಆಹಾರ, ವ್ಯಾಪಾರಗಳನ್ನು ಎಳೆತಂದು, ಅಸಹಿಷ್ಣುತೆ ಸೃಷ್ಟಿಸಿ ಭಾರತವನ್ನು ಧರ್ಮದ ಆಧಾರದಲ್ಲಿ ಒಡೆದುಹಾಕುವುದಾ? ಕರ್ನಾಟಕದ ನಂತರ ನಿಮ್ಮ ಮುಂದಿನ ಗುರಿ ದಕ್ಷಿಣ ಭಾರತ. ಹೌದಲ್ಲವೇ ಸಿ.ಟಿ.ರವಿಯವರೇ? ಎಂದು ಕುಟುಕಿದ್ದಾರೆ.

ಆಪರೇಷನ್ ದಕ್ಷಿಣ್ ಅಂದರೆ, ಆಪರೇಷನ್ ಕಮಲದ ರಾಷ್ಟ್ರೀಕರಣ ಮತ್ತು ತುಷ್ಠೀಕರಣ. ಶಾಸಕರ ಖರೀದಿ, ಕುದುರೆ ವ್ಯಾಪಾರ, ಕರ್ನಾಟಕದ ನಂತರ ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೂ ವಿಸ್ತರಿಸುವ ಡೋಂಗಿ ರಾಷ್ಟ್ರಪ್ರೇಮಿಗಳ ರಾಜಕಾರಣ. ದಕ್ಷಿಣದ ಮೇಲೆ ಆಪರೇಷನ್ ಕಮಲದ ದುರಾಕ್ರಮಣ!! ಹೌದಲ್ಲವೇ ಸಿ.ಟಿ.ರವಿಯವರೇ? ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಒಬ್ಬರು ಬೇಕಲ್ಲವೇ? ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರನ್ನೇ ಬ್ರ್ಯಾಂಡ್ ರಾಯಭಾರಿ ಮಾಡುತ್ತೀರಾ? ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಇದೂ ಚರ್ಚೆಗೆ ಬಂತಾ? ಮೋದಿ ಸಾಹೇಬರು ಒಪ್ಪಿದರಾ? ಎಷ್ಟಾದರೂ ನಿಮ್ಮ ಅಮಿತೋತ್ಸಾಹಕ್ಕೆ ಆಪರೇಷನ್ ಕಮಲವೇ ಕಾರಣ, ಅಲ್ಲವೇ? ಎಂದು ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್ ದಕ್ಷಿಣ್ ಅಂದರೆ, ಬಿಜೆಪಿ ಪರಿವಾರ ರಾಜಕಾರಣವನ್ನು ಮತ್ತಷ್ಟು ಬಲಪಡಿಸುವುದಾ? ಆಗ ಕಾಂಗ್ರೆಸ್ ಮುಕ್ತ ಭಾರತ! ಈಗ ಪರಿವಾರಮುಕ್ತ ಭಾರತ! ನಂತರ ಪ್ರತಿಪಕ್ಷ ಮುಕ್ತ ಭಾರತ! ಮುಂದೆ ಸಂಪೂರ್ಣ ಪ್ರಜಾಪ್ರಭುತ್ವ ಮುಕ್ತ ಭಾರತ್ ನಿರ್ಮಾಣ!. ಇದಲ್ಲವೇ ನಿಮ್ಮ ಬಿಜೆಪಿಯ ಭವ್ಯಗುರಿ? ಸಿ. ಟಿ.ರವಿ ಅವರೇ ಉತ್ತರಿಸಿ ಎಂದು ಕಾಲೆಳೆದಿದ್ದಾರೆ.

ದಕ್ಷಿಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಶಕ್ತಿ. ಇಲ್ಲಿ ಹೆಜ್ಜೆ ಇಡಲು ಬಿಜೆಪಿಗೆ ಆಗುತ್ತಿಲ್ಲ. ಆಪರೇಷನ್‌ ಕಮಲದಿಂದ ಕರ್ನಾಟಕದಲ್ಲಿ ಅಧಿಕಾರ ಹಿಡಿದಿರಿ. ಒಡಿಶಾ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳದಲ್ಲಿ ನಿಮ್ಮ ಬೇಳೆ ಬೇಯಲಿಲ್ಲ. ಅದಕ್ಕೀಗ ʼಪರಿವಾರಮುಕ್ತ ರಾಜಕೀಯʼ ಎಂದು ರಾಗ ತೆಗೆಯುತ್ತಿದ್ದೀರಿ. ಸತ್ಯ ಹೇಳಿ @CTRavi_BJP ಯವರೇ? 7/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 4, 2022

ದಕ್ಷಿಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಶಕ್ತಿ. ಇಲ್ಲಿ ಹೆಜ್ಜೆ ಇಡಲು ಬಿಜೆಪಿಗೆ ಆಗುತ್ತಿಲ್ಲ. ಆಪರೇಷನ್ ಕಮಲದಿಂದ ಕರ್ನಾಟಕದಲ್ಲಿ ಅಧಿಕಾರ ಹಿಡಿದಿರಿ. ಒಡಿಶಾ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳದಲ್ಲಿ ನಿಮ್ಮ ಬೇಳೆ ಬೇಯಲಿಲ್ಲ. ಅದಕ್ಕೀಗ ʼಪರಿವಾರಮುಕ್ತ ರಾಜಕೀಯʼ ಎಂದು ರಾಗ ತೆಗೆಯುತ್ತಿದ್ದೀರಿ. ಸತ್ಯ ಹೇಳಿ ಸಿ.ಟಿ.ರವಿಯವರೇ ಎಂದು ಕಿಡಿಕಾರಿದ್ದಾರೆ.

ಪ್ರಾದೇಶಿಕ ಪಕ್ಷಗಳನ್ನು ಎದುರಿಸಲಾಗದ ಬಿಜೆಪಿ, ಈಗ ಪರಿವಾರ ಜಪ ಮಾಡುತ್ತಿದೆ. ಅಯ್ಯೋ ಪಾಪ!! ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ನೀವು ಮುಖ್ಯಮಂತ್ರಿ ಮಾಡಿದ ಶ್ರೀ ಏಕನಾಥ ಶಿಂಧೆ ಅವರ ʼಏಕಪರಿವಾರ ಪಾಲಿಟಿಕ್ಸ್ʼ ಗೊತ್ತಿರಲಿಲ್ಲವೇ? ಬೋದನೆ ಒಂದು! ಬೋಜನ ಇನ್ನೊಂದು!! ಛೇ, ಹೇಸಿಗೆ.. ಯಡಿಯೂರಪ್ಪ & ಸನ್ಸ್, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ಸೋಮಣ್ಣ-ಅರುಣ್ ಸೋಮಣ್ಣ, ಲಿಂಬಾಳಿ-ರಘು, ವಿಶ್ವನಾಥ್-ವಾಣಿ ವಿಶ್ವನಾಥ್, ಶೆಟ್ಟರ್-ಪ್ರದೀಪ್ ಶೆಟ್ಟರ್, ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ & ಜಾರಕಿಹೊಳಿ, ಕತ್ತಿ, ಅಂಗಡಿ, ಉದಾಸಿ ಕುಟುಂಬಗಳು.. ಇದೆಲ್ಲಾ ಏನು? ಎಂದು ಕುಟುಂಬ ರಾಜಕಾರಣ ಕುರಿತು ಪ್ರಶ್ನಿಸಿದ್ದಾರೆ.

ಪರಿವಾರ ರಾಜಕಾರಣಕ್ಕೆ ಬಿಜೆಪಿ ಅತೀತವಲ್ಲ. ರಾಜ್ಯದ ಲೆಕ್ಕ ಕೊಟ್ಟಿದ್ದೇನೆ. ಭಾರತದ ಪಟ್ಟಿ ಕೊಡಲೇ? ಅಬ್ಬರ ಜಾಸ್ತಿ, ಅಭಿವೃದ್ಧಿ ನಾಸ್ತಿ. ಇದು ಬಿಜೆಪಿ ನೀತಿ. ಬಿಜೆಪಿ ಪಕ್ಷದ್ದು ಆಪರೇಷನ್ ದಕ್ಷಿಣ್ ಅಲ್ಲ, ಆ ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್ ಆಗುವ ಕಾಲ ಹತ್ತಿರದಲ್ಲೇ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಧಾನಿ ಮೋದಿ ಇದ್ದ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್!

Next Post

5ನೇ ಟೆಸ್ಟ್:‌ ಭಾರತ 245ಕ್ಕೆ ಆಲೌಟ್‌, ಇಂಗ್ಲೆಂಡ್‌ 377 ರನ್‌ ಗುರಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
5ನೇ ಟೆಸ್ಟ್:‌ ಭಾರತ 245ಕ್ಕೆ ಆಲೌಟ್‌, ಇಂಗ್ಲೆಂಡ್‌ 377 ರನ್‌ ಗುರಿ

5ನೇ ಟೆಸ್ಟ್:‌ ಭಾರತ 245ಕ್ಕೆ ಆಲೌಟ್‌, ಇಂಗ್ಲೆಂಡ್‌ 377 ರನ್‌ ಗುರಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada