• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರದಲ್ಲಿ ಒಂದು ನೀತಿ, ರಾಜ್ಯದಲ್ಲಿ ಮತ್ತೊಂದು ನೀತಿ : ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ತನ್ನ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಜೆಪಿಯ ಇಬ್ಬರು ಪೋಷಕ ಉದ್ಯಮಿಗಳ ಹಿತಾಸಕ್ತಿ ಕಾಯುವುದಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಲಖಿಂಪುರ ಖೇರಿ ರೈತರ ಮೇಲೆ ಕಾರು ಹತ್ತಿಸಿ, ಹಿಂಸಾಚಾರದ ಮೂಲಕ ಎಂಟು ಮಂದಿಯ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಇವತ್ತಿಗೆ ಒಂದು ವರ್ಷ ಪೂರೈಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ADVERTISEMENT

ಕೇಂದ್ರ ಸಚಿವ ಅಜಯ್ ಮಿಶ್ರಾ ಕುಮ್ಮಕ್ಕಿನಿಂದ ಇವರ ಪುತ್ರ ಆಶಿಶ್ ಮಿಶ್ರಾ ಮತ್ತು ಗ್ಯಾಂಗ್ ಶಾಂತ ರೀತಿಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತ ಸಮುದಾಯದ ಮೇಲೆ ದಾಳಿ ನಡೆಸಿದ್ದು ಮತ್ತು ಕಾರು ಹತ್ತಿಸಿದ್ದರ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದರು. ಈ ಅನಾಗರಿಕ ಕೊಲೆ ನಡೆದು ಇವತ್ತಿಗೆ ಒಂದು ವರ್ಷ. ಆದರೂ ಇದುವರೆಗೂ ಸಂತ್ರಸ್ಥ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ. ಘಟನೆ ನಂತರ ಸರ್ಕಾರ ತಾನೇ ವಾಗ್ದಾನ ಮಾಡಿದ್ದ ರೈತರ ಬೇಡಿಕೆಗಳನ್ನು ಇದುವರೆಗೂ ಈಡೇರಿಸಿಲ್ಲ. ಘಟನೆಯ ಪ್ರಮುಖ ಸಾಕ್ಷಿ ದಿಲ್ಬಾಗ್ ಮೇಲೆ ಗುಂಡಿನ ದಾಳಿ ನಡೆಯಿತು. ಪ್ರಕರಣದ ತನಿಖೆಯನ್ನು ಸೂಕ್ತವಾಗಿ ನಡೆಸುತ್ತಿಲ್ಲ ಎಂದು ನ್ಯಾಯಾಲಯಗಳೂ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿವೆ ಎಂದು ಬೇಸರಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 378 ದಿನಗಳ ಕಾಲ ನಡೆದ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಕಾರಣಕ್ಕೆ ಕೇಂದ್ರ ಜಾರಿಗೆ ತಂದಿದ್ದ ಮೂರು ಅನಾಗರಿಕ ರೈತ ಕಾಯ್ದೆಗಳನ್ನು 750ಕ್ಕೂ ಅಧಿಕ ಸಂಖ್ಯೆಯ ರೈತರು ಹುತಾತ್ಮರಾದ ಬಳಿಕ ಪ್ರಧಾನಿ ಮೋದಿ ಅವರು ನೆಪ ಮಾತ್ರಕ್ಕೆ ಹಿಂದಕ್ಕೆ ಪಡೆದರು. ಆದರೆ ನಮ್ಮ ರಾಜ್ಯವೂ ಸೇರಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮಾತ್ರ ಇನ್ನೂ ಕಾಯ್ದೆಗಳನ್ನು ವಾಪಾಸ್ ಪಡೆಯಲಾಗಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲೂ ರೈತರು ಈ ಕಾಯ್ದೆಗಳನ್ನು ವಿರೋಧಿಸಿ ಬೀದಿಗಿಳಿದು ದಿನಗಟ್ಟಲೆ ಪ್ರತಿಭಟನೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಇನ್ನೂ ಆ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ಮನಸ್ಸು ಮಾಡಿಲ್ಲ. ಕೇಂದ್ರದಲ್ಲಿ ಒಂದು ನೀತಿ, ರಾಜ್ಯದಲ್ಲಿ ಮತ್ತೊಂದು ನೀತಿ. ಇದು ಡಬ್ಬಲ್ ಎಂಜಿನ್ ಸರ್ಕಾರದ ಡಬ್ಬಲ್ ನಾಲಗೆ ನೀತಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಆದ್ದರಿಂದ ಪ್ರಧಾನಿ ಮೋದಿ ಅವರು ತಕ್ಷಣ ಮಧ್ಯ ಪ್ರವೇಶಿಸಿ ಲಖಿಂಪುರ್ ಖೇರಿ ಪ್ರಕರಣದ ಕ್ಷಿಪ್ರ ವಿಚಾರಣೆಗೆ ತ್ವರಿತ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಲು ಯೋಗಿ ಸರ್ಕಾರಕ್ಕೆ ಸೂಚನೆ ನೀಡಬೇಕು. ಇಡಿ ದೇಶದ ರೈತರ ಪ್ರಮುಖ ಬೇಡಿಕೆಯಾಗಿರುವ ಎಂಎಸ್ಪಿ ಯನ್ನು ಈ ಕೂಡಲೇ ಶಾಸನಬದ್ದಗೊಳಿಸಬೇಕು. ಮೃತ ರೈತ ಕುಟುಂಬಗಳಿಗೆ ಮನೆಗೊಂದು ಸರ್ಕಾರಿ ಉದ್ಯೋಗ ನೀಡುವುದರ ಜತೆಗೆ ಘಟನೆ ಸಂದರ್ಭದಲ್ಲಿ ಸರ್ಕಾರ ನೀಡಿದ್ದ ಭರವಸೆಗಳನ್ನು ಕೂಡಲೇ ಈಡೇರಿಸಬೇಕು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳೂ ಕೇಂದ್ರ ಹಿಂದಕ್ಕೆ ಪಡೆದ ಕಾಯ್ದೆಗಳನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದ ಮೊದಲ 5G ಕರೆ ಮಾಡಿದ ಪ್ರಧಾನಿ ಮೋದಿ

Next Post

7 ವಿಧಾನಸಭೆಗಳ ಉಪಚುನಾವಣೆ ದಿನಾಂಕ ಪ್ರಕಟ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
7 ವಿಧಾನಸಭೆಗಳ ಉಪಚುನಾವಣೆ ದಿನಾಂಕ ಪ್ರಕಟ

7 ವಿಧಾನಸಭೆಗಳ ಉಪಚುನಾವಣೆ ದಿನಾಂಕ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada