ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದೆ ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಜನತೆಯ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಿಎಂ ಸಿದ್ದರಾ,ಯ್ಯ ಆಗ್ರಹಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 2017ರಲ್ಲಿ ಸಂಭವಿಸಿದ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿಬಿಐ ಪರೇಶ್ ಸಾವು ಕೊಲೆಯಲ್ಲ ಆಕಸ್ಮಿಕ ಎಂದು ವರದಿ ನೀಡಿತ್ತು.
ಸುಮಾರು ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಸುಮಾರುನ 1,500 ಪುಟಗಳ ಬಿ ರಿಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಸರ್ಕಾರದ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂಧು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.