ನಮ್ಮ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸಲು ಸಿದ್ದವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಾದಾಮಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಮಾತನಾಡಿ, ಕಾಂಗ್ರೆಸ್ಸಿನವರು ಯಾವಾಗಲೂ ಚುನಾವಣೆ ಎದುರಿಸಲು ಸಿದ್ದರಿದ್ದಾರೆ. ತಾಲೂಕು, ಜಿಲ್ಲಾ ಅಥವಾ ವಿಧಾನಸಭೆ ಚುನಾವಣೆಯಾಗಲಿ ಪಕ್ಷ ಸದಾ ಸಿದ್ದವಿರುತ್ತದೆ ಎಂದರು.
ಕ್ಷೇತ್ರದ ಜನರು ಬಾದಾಮಿಯಿಂದಲೇ ನೀವು ಸಿಎಂ ಆಗಬೇಕು ಎಂದು ಹೇಳುತ್ತಾರೆ. ಆದರೆ, ಇನ್ನು ಒಂದೂವರೆ ವರ್ಷಗಳ ಕಾಲ ಸಮಯವಿದೆ. ಈಗಲೇ ಏನನ್ನೂ ಹೇಳೋಕೆ ಸಾಧ್ಯವಿಲ್ಲ. ಐದಾರು ಕ್ಷೇತ್ರದಿಂದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹೈಕಮಾಂಡ್ ಏನು ಸೂಚನೆ ನೀಡುತ್ತದೆ ಎಂಬುದನ್ನ ಕಾದು ನೋಡಬೇಕಿದೆ ಎಂದು ವಿವರಿಸಿದರು.