ಮಾಜಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೋಮವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್ ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಆಮ್ ಆದ್ಮಿಗೆ ಸೇರ್ಪಡೆಯಾದರು.
ಪ್ರಸ್ತುತ ರೈಲ್ವೆ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕರಿಸಿದ ಬೆನ್ನಲ್ಲೇ ಆಪ್ ಸೇರಿದರು.