ಕಾಂಗ್ರೆಸ್ ಶಾಸಕ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಅನ್ನೋ ಚರ್ಚೆ ನಡೆದಿತ್ತು. ಇದರ ನಡುವೆ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಶಿರಸಿಯ ಬನವಾಸಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ಶಾಸಕರಾಗಿರುವ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರನ್ನು ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ವಿವೇಕ್ ಹೆಬ್ಬಾರ್ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ವಿವೇಕ್ ಹೆಬ್ಬಾರ್.
ಸದ್ಯ ಬಿಜೆಪಿ ಪಕ್ಷದಿಂದ ಶಾಸಕರಾಗಿರುವ ಶಿವರಾಮ ಹೆಬ್ಬಾರ್, ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮಗನ ಪಕ್ಷ ಸೇರ್ಪಡೆ ಬಳಿಕ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎನ್ನಲಾಗಿದೆ. ಬಿಜೆಪಿ ಶಾಸಕರಾದರೂ ಇಲ್ಲೀವರೆಗೂ ಬಿಜೆಪಿ ಕಾರ್ಯಕ್ರಮಗಳಲ್ಲಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ ಹೆಬ್ಬಾರ್.
ಬಿಜೆಪಿ ಕೋಟೆ ಎನಿಸಿಕೊಂಡಿರುವ ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಲು ಮಂಕಾಳು ವೈದ್ಯ ಯೋಜನೆ ರೂಪಿಸಿದ್ದಾರೆ. ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಿಜೆಪಿ ಪಕ್ಷದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅಭ್ಯರ್ಥಿ ಆಗಿದ್ದಾರೆ. ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಸಿಗದ ಕೋಪದಲ್ಲಿದ್ದು, ಕಾಂಗ್ರೆಸ್ಗೆ ಸಹಾಯವಾಗುವ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.














