ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಗವಿಯಪ್ಪರನ್ನು ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಬಿ.ಕೆ.ಹರಿಪ್ರಸಾದ್ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್ ಗವಿಯಪ್ಪ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು ಕಾರಣಾಂತರಗಳಿಂದ ಪಕ್ಷ ತೊರೆದಿದ್ದರು. ಈಗ ಮರಳಿ ಪಕ್ಷ ಸೇರಿರುವುದು ಸಂತಸವಾಗಿದೆ ಎಂದಿದ್ದಾರೆ.

ಗವಿಯಪ್ಪ ನಮ್ಮಗೆ ಯಾವುದೇ ಷರತ್ತುಗಳನ್ನು ಹಾಕದೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇವರ ಸೇರ್ಪಡೆ ಕುರಿತು ಯಾವುದೇ ವಿರೋಧ ಕೇಳಿ ಬಂದಿಲ್ಲ ನಾವು ಯಾರಿಗೂ ಯಾವ ಕುರ್ಚಿಯನ್ನು ನೀಡಿಲ್ಲ ರಾಜೀನಾಮೆ ಬೆದರಿಕೆ ನೀಡುವವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಾಹುಲ್ ಗಾಂಧಿಯವರು ವಿಜಯನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಈ ವೇಳೆ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದ್ದಾರೆ.