ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಣ್ಣನೇ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ. ಮಂಡ್ಯದಲ್ಲಿ
ಮಾತನಾಡಿದ ಸಿಎಸ್ ಪುಟ್ಟರಾಜು, ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಣ್ಣನೇ. ನಾನು ಲೋಕಸಭೆ ಚುನಾವಣೆ ನೇತೃತ್ವ ವಹಿಸುತ್ತೇನೆ. ಪ್ರಚಂಡ ಬಹುಮತದಲ್ಲಿ ಕುಮಾರಣ್ಣನನ್ನ ಗೆಲ್ಲಿಸುತ್ತೇವೆ. ಕುಮಾರಣ್ಣನಿಗೆ ನಾಮಪತ್ರ ಸಲ್ಲಿಸುವುದಕ್ಕೆ ಮಾತ್ರ ಬನ್ನಿ ಎಂದಿದ್ದೇವೆ. ನಾವೇ ಓಡಾಡಿ ಕುಮಾರಸ್ವಾಮಿ ಗೆಲ್ಲಿಸುತ್ತೇವೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನ ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಈ ಮಧ್ಯೆ ಸೀಟು ಹಂಚಿಕೆ ಇನ್ನು ಅಧಿಕೃತವಾಗಿ ಘೋಷಣೆಯಾಗಿಲ್ಲ ಎನ್ನಲಾಗಿದೆ.

ಸುಮಲತಾ ನಡೆ ನಿಗೂಢ..
ಮಂಡ್ಯದಿಂದಲೇ ಸ್ಪರ್ಧಿಸ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದೀಗ ಪುಟ್ಟರಾಜು ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ ಹೈ ವೋಲ್ಟೇಜ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಮಂಡ್ಯ ಸೀಟ್ ವಿಚಾರ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿದೆ. ಅಂತಿಮವಾಗಿ ಬಿಜೆಪಿ ಹೈ ಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಅನ್ನೋದೇ ಸದ್ಯದ ಕುತೂಹಲವಾಗಿದೆ.ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಣ್ಣನೇ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಿಎಸ್ ಪುಟ್ಟರಾಜು, ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಣ್ಣನೇ. ನಾನು ಲೋಕಸಭೆ ಚುನಾವಣೆ ನೇತೃತ್ವ ವಹಿಸುತ್ತೇನೆ. ಪ್ರಚಂಡ ಬಹುಮತದಲ್ಲಿ ಕುಮಾರಣ್ಣನನ್ನ ಗೆಲ್ಲಿಸುತ್ತೇವೆ. ಕುಮಾರಣ್ಣನಿಗೆ ನಾಮಪತ್ರ ಸಲ್ಲಿಸುವುದಕ್ಕೆ ಮಾತ್ರ ಬನ್ನಿ ಎಂದಿದ್ದೇವೆ. ನಾವೇ ಓಡಾಡಿ ಕುಮಾರಸ್ವಾಮಿ ಗೆಲ್ಲಿಸುತ್ತೇವೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನ ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಈ ಮಧ್ಯೆ ಸೀಟು ಹಂಚಿಕೆ ಇನ್ನು ಅಧಿಕೃತವಾಗಿ ಘೋಷಣೆಯಾಗಿಲ್ಲ ಎನ್ನಲಾಗಿದೆ. ಸುಮಲತಾ ನಡೆ ನಿಗೂಢ.. ಮಂಡ್ಯದಿಂದಲೇ ಸ್ಪರ್ಧಿಸ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದೀಗ ಪುಟ್ಟರಾಜು ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ ಹೈ ವೋಲ್ಟೇಜ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಮಂಡ್ಯ ಸೀಟ್ ವಿಚಾರ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿದೆ. ಅಂತಿಮವಾಗಿ ಬಿಜೆಪಿ ಹೈ ಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಅನ್ನೋದೇ ಸದ್ಯದ ಕುತೂಹಲವಾಗಿದೆ.