• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೌಜನ್ಯ ಪ್ರಕರಣ | ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು ; ವಸಂತ ಬಂಗೇರ ಸ್ಫೋಟಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 7, 2023
in ಇದೀಗ, ಕರ್ನಾಟಕ, ರಾಜಕೀಯ
0
ಸೌಜನ್ಯ ಪ್ರಕರಣ
Share on WhatsAppShare on FacebookShare on Telegram

ಸೌಜನ್ಯ ಪ್ರಕರಣ ಬಗ್ಗೆ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ಅವರು ಸೋಮವಾರ (ಆಗಸ್ಟ್ 7) ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ.

ADVERTISEMENT

“ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ದಾರಿ ತಪ್ಪಿಸಲಾಗಿತ್ತು. ಇಂತಹ ರಹಸ್ಯಗಳನ್ನು ಬಿಚ್ಚಟ್ಟರೆ ತಮ್ಮನ್ನೂ ಕೊಲ್ಲಬಹುದು” ಎಂದು ವಸಂತ ಬಂಗೇರ ಹೇಳಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಖಾಕಿಯಾಗಲೀ, ಕಾವಿಯಾಗಲೀ ಅವರನ್ನು ತನಿಖೆ ಮಾಡುವ ಶಕ್ತಿ ನಮ್ಮಲ್ಲಿ ಇದೆ. ಸಮಯ ಬಂದಾಗ ಮಾತನಾಡುತ್ತೇನೆ. ಆಗ ನನ್ನನ್ನೂ ಕೊಲ್ಲಬಹುದು. ಆದರೆ ಸಾಯುವ ಮೊದಲು ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಸುಮಾರು ಮೂರ್ನಾಲ್ಕು ವರ್ಷ ನಾನು ಶಾಸಕನಾಗಿದ್ದಾಗ, ಸುಮಾರು ಒಂದು ಕಾಲು ಗಂಟೆಗೂ ಅಧಿಕ ಸಮಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ತಾಲೂಕಿನ ಶ್ರೀಕ್ಷೇತ್ರದಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದರು” ಎಂದು ಮಾಹಿತಿ ನೀಡಿದರು.

“ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎಂಬುದು ನನಗೆ ತಿಳಿಯಿತು. ಅದನ್ನ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸುತ್ತೇನೆ” ಎಂದು ಪ್ರತಿಪಾದಿಸಿದರು.

ಸಮಯ ಬರುತ್ತದೆ. ಅಂದು ಸೌಜನ್ಯ ಪ್ರಕರಣ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ಮಾಡಿದ್ದು, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆಗ ಅವರು ನನಗೆ ಹಾನಿ ಮಾಡಬಹುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಸಿ ಇಲ್ಲದೆ ಬೆವೆತ ಸ್ಥಿತಿ: ಇಂಡಿಗೊ ವಿಮಾನ ಪ್ರಯಾಣದ ಕಹಿ ಅನುಭವ ಹಂಚಿಕೊಂಡ ಪಂಜಾಬ್‌ ಕಾಂಗ್ರೆಸ್‌ ನಾಯಕ

“ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂದು ಹೇಳುತ್ತೇನೆ. ತಪ್ಪು ಮಾಡಿದವರು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನು ಅನುಭವಿಸಲೇಬೇಕು. ಖಾಕಿಯಾಗಲೀ, ಕಾವಿಯಾಗಲೀ ಅವರನ್ನೂ ತನಿಖೆ ಮಾಡುವ ಶಕ್ತಿ ನಮ್ಮಲ್ಲಿ ಇದೆ” ಎಂದು ಎಚ್ಚರಿಕೆಯ ಧಾಟಿಯಲ್ಲಿ ಹೇಳಿದರು.

ಶೀಘ್ರದಲ್ಲೇ ಸೌಜನ್ಯ ಪ್ರಕರಣ ಬಗ್ಗೆ ಆಕೆಗೆ ಆದ ಅನ್ಯಾಯದ ವಿರುದ್ಧ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತದೆ. ಸೌಜನ್ಯ ಕುಟುಂಬಸ್ಥರನ್ನು ಮುಖ್ಯಮಂತ್ರಿಗಳಿಗೆ ಖುದ್ದು ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ. ಶೀಘ್ರದಲ್ಲೇ ಸತ್ಯಕ್ಕೆ ಜಯ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

Tags: CBICM SiddaramaiahSoujanya CaseVasanth Bangeraಮುಖ್ಯಮಂತ್ರಿ ಸಿದ್ದರಾಮಯ್ಯಸಿಬಿಐಸೌಜನ್ಯ ಪ್ರಕರಣ
Previous Post

ತಮಿಳುನಾಡಿಗೆ ಕಾವೇರಿ ನದಿ ನೀರು | ಇಂದು ನೀರಾವರಿ ಸಲಹಾ ಸಮಿತಿ ಸಭೆ

Next Post

ಸಭಾಧ್ಯಕ್ಷ ಓಂ ಬಿರ್ಲಾಗೆ ಅಧೀರ್ ರಂಜನ್ ಚೌಧರಿ ಪತ್ರ | ಬಿಜೆಪಿ ಸಂಸದ ನಿಶಿಕಾಂತ್‌ ಹೇಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ಅಧೀರ್‌ ರಂಜನ್‌ ಚೌಧರಿ

ಸಭಾಧ್ಯಕ್ಷ ಓಂ ಬಿರ್ಲಾಗೆ ಅಧೀರ್ ರಂಜನ್ ಚೌಧರಿ ಪತ್ರ | ಬಿಜೆಪಿ ಸಂಸದ ನಿಶಿಕಾಂತ್‌ ಹೇಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!