ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯೂ ಸದ್ಯ ರಾಜಸ್ಥಾನದ ಭಡೋಟಿಯಲ್ಲಿ ಸಾಗುತ್ತಿದ್ದು ಯಾತ್ರೆ ಈಗಾಗಲೇ ಹಲವು ವಿಶೇಷತೆಗಳಿಂದ ಸಾಕಷ್ಟು ಸದ್ದು ಮಾಡುತ್ತಿದೆ.
ಇನ್ನು ಮಂಗಳವಾರ ಬೆಳ್ಳಗ್ಗೆ ಭಡೋಟಿಯಲ್ಲಿ ಆರಂಭವಾದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)ದ ಮಾಜಿ ಗವರ್ನರ್ ರಘುರಾಮ್ ರಾಜನ್ ಕೂಡಿಕೊಂಡಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ದೇಶವನ್ನ ಒಗ್ಗೂಡಿಸಲು ಮಾಡುತ್ತಿರುವ ಯಾತ್ರೆಯ ಪರ ನಿಲ್ಲುವವರ ಸಂಖ್ಯೆ ಹೆಚ್ಚಾಗುತ್ತಿದೆ ಮತ್ತು ನಾವು ದ್ವೇಷ ಹರಡುವವರ ವಿರುದ್ದ ಹೋರಾಟದಲ್ಲಿ ಜಯ ಗಳಿಸುತ್ತೇವೆ ಎಂದು ಟ್ವೀಟ್ ಮಾಡಿದೆ.