ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 12 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಮಿಳುನಾಡಿನ (Tamil Nadu) ಶಿವಕಾಶಿ (Sivakasi) ಬಳಿಯ ಪಟಾಕಿ ಕಾರ್ಖಾನೆಯಲ್ಲಿಯೇ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 8 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕಗಳನ್ನು ಬಳಕೆ ಮಾಡುವ ವೇಳೆ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಳೆದ ವರ್ಷವಷ್ಟೇ ಪಟಾಕಿ ಕಾರ್ಖಾನೆಗಳ ಅವಘಡದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ತಿಂಗಳು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.