• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಪ್ರತಿಧ್ವನಿ by ಪ್ರತಿಧ್ವನಿ
May 25, 2026
in ಕರ್ನಾಟಕ
0
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿ, ಕರ್ತವ್ಯಲೋಪದ ಆರೋಪದ ಮೇಲೆ ಓರ್ವ ಪಿಎಸ್‌ಐ, ಓರ್ವ ಎಎಸ್‌ಐ ಹಾಗೂ ನಾಲ್ವರು ಕಾನ್ಸ್‌ಟೇಬಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ ಗೌಡ ಆದೇಶ ಹೊರಡಿಸಿದ್ದಾರೆ.

ADVERTISEMENT
K V Prabhakar  : ಸಂದರ್ಭಕ್ಕೆ ತಕ್ಕಂತೆ ಬಂದ ಸಿನಿಮಾಗಳು ಚಳುವಳಿಗಳ ಯಶಸ್ಸಿಗೆ ಶ್ರಮಿಸಿವೆ.. #pratidhvani

ಮೇ 10ರಂದು ಪ್ರಧಾನಿ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದರು. ಅವರು ತೆರಳಬೇಕಿದ್ದ ಮಾರ್ಗದ ಸಮೀಪ ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು.

ಭದ್ರತಾ ಕರ್ತವ್ಯದಲ್ಲಿದ್ದ ಪೇದೆಯೊಬ್ಬರು ರಸ್ತೆ ಬದಿಯಲ್ಲಿ ಬಿದ್ದಿದ್ದ ಬಾಕ್ಸ್ ಗಮನಿಸಿದ್ದು, ತಕ್ಷಣವೇ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಬಾಕ್ಸ್ ಪರಿಶೀಲಿಸಿದಾಗ ಅದರೊಳಗೆ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು.ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಪ್ರಧಾನಿ ಸಂಚಾರ ಮಾರ್ಗವನ್ನು ಸಂಪೂರ್ಣವಾಗಿ ಮರು ತಪಾಸಣೆ ನಡೆಸಿದ್ದರು.

YouTube player

ಭದ್ರತಾ ದೃಷ್ಟಿಯಿಂದ ಸಂಪೂರ್ಣ ಕ್ಲಿಯರೆನ್ಸ್ ದೊರಕಿದ ನಂತರವೇ ಪ್ರಧಾನಿ ಮೋದಿ ಅವರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು.ಘಟನೆಯ ವೇಳೆ ಭದ್ರತಾ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಇದೀಗ ಅಮಾನತು ಕ್ರಮ ಕೈಗೊಳ್ಳಲಾಗಿದೆ.

Tags: #ArtOfLiving#BangaloreNews#bengaluru#BombSquad#ExplosiveCase#narendramodi#PMModiVisit#PoliceAction#PoliceSuspension#VaderahalliGatebreakingnewskarnatakanewsKarnatakaPoliceSecurityAlertSecurityBreach
Previous Post

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada