ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣ ನಡೆದು ಮೂರು ತಿಂಗಳು ಕಳೆದಿದೆ. ಸೆಪ್ಟೆಂಬರ್ 9 ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು ಇದರ ವಿಚಾರಣೆ ಇಂದು ನಡೆದಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9 ಕೊನೆ ಆಗಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಿದ್ದು. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಅವರು ಬಳ್ಳಾರಿ ಜೈಲಿನಿಂದ(Darshan From Bellary Jail) , ಪವಿತ್ರಾ ಗೌಡ (Pavithra Gowda)ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ (Vedio Conferrance) ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.
ಬೆಂಗಳೂರಿನ 24ನೇ ಎಸಿಎಂಎಂ (ACMM Court)ಕೋರ್ಟ್‌ಗೆ ಹಾಜರಾದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ (Prasanna Kumar) ಅವರು ಪ್ರಕರಣದ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಸಿದರು. ಪೆನ್ಡ್ರೈವ್(Pendrive), ಹಾರ್ಡ್ಡಿಸ್ಕ್(Hard disk) ಸೇರಿ ಹಲವು ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದಾರೆ. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡಲಿದ್ದಾರೆ.
ನಟ ದರ್ಶನ್ ಅವರು ಜೈಲು ಸೇರಿ ಮೂರು ತಿಂಗಳು ಕಳೆದಿದೆ, ಜೂನ್ 11ರಂದು ದರ್ಶನ್, ಪವಿತ್ರಾ ಮೊದಲಾದವರು ಅರೆಸ್ಟ್ ಆದರು. ಆ ಬಳಿಕ ಹಂತ ಹಂತವಾಗಿ ಎಲ್ಲರೂ ಬಂಧನಕ್ಕೆ ಒಳಗಾಗುತ್ತಾ ಬಂದರು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿಯನ್ನು ಬಂಧಿಸಲಾಗಿದೆ.