ಲಾಕ್‌ಡೌನ್‌ ವಿಸ್ತರಣೆ: ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯ –ಹೆಚ್‌ಡಿಕೆ

ರಾಜ್ಯದಲ್ಲಿ ಕೋವಿಡ್‌ ಸೋಂಕು ಹೆಚ್ಚಳದ ಕಾರಣ ಸರ್ಕಾರ ಮತ್ತೆ ಲಾಕ್‌ಡೌನ್‌ ಅವಧಿಯನ್ನು ವಿಸ್ತರಿಸುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವಿಟರ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‌ಡೌನ್‌’ ಕಲ್ಪನೆಯೇ ಆಗಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ರಾಜ್ಯ ಸರ್ಕಾರವನ್ನು  ಎಚ್ಚರಿಸಿದ್ದಾರೆ.

 ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...