ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ದಿನೇ ದಿನ ಚಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ತಕ್ಷಣದಿಂದ ಜನವರಿ 15ರವರೆಗೆ ರಜೆ ಘೋಷಿಸಿ ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ.
ನವದೆಹಲಿ ಕೆಲವು ವಾರಗಳಿಂದಲೂ ನಿರಂತರವಾಗಿ ತೀವ್ರ ಚಳಿಗೆ ತತ್ತರಿಸಿ ಹೋಗಿದೆ. ಭಾನುವಾರ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ಗೆ ತೀವ್ರ ಹಂತಕ್ಕೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿ ಸರ್ಕಾರದ ಸೂಚನೆಯ ಮೇರೆಗೆ ಶಿಕ್ಷಣ ನಿರ್ದೇಶನಾಲಯ.

ಖಾಸಗಿ ಶಾಲೆಯ 9ನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ಶಿಕ್ಷಣ ನಿರ್ದೇಶನಾಲಯ ಹೇಳಿದೆ






