ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿಯ ಮುಖಂಡ ದೇವೇಂದ್ರ ಫಡ್ನವೀಸ್ (devendra Fadnavis) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಜುಲೈ ೧ರಂದು ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಶಿವಸೇನೆ ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಶಿವಸೇನೆ ಬಂಡಾಯ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದು, ನಂತರ ಇಬ್ಬರೂ ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.