• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಕಲಿ ದಾಖಲೆ ಪತ್ರ ಸೃಷ್ಠಿಸುತ್ತಿದ್ದ ವ್ಯಕ್ತಿ ಅರೆಸ್ಟ್!

Any Mind by Any Mind
October 7, 2023
in ಕರ್ನಾಟಕ
0
ನಕಲಿ ದಾಖಲೆ ಪತ್ರ ಸೃಷ್ಠಿಸುತ್ತಿದ್ದ ವ್ಯಕ್ತಿ ಅರೆಸ್ಟ್!
Share on WhatsAppShare on FacebookShare on Telegram

ADVERTISEMENT

ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ಬಿಕರ್ನಕಟ್ಟೆ ಬಜ್ಜೋಡಿಯ  ಬರ್ನಾಡ್ ರೋಶನ್ ಮೆಸ್ಕರೆನಸ್  (41) ಬಂಧಿತ ಆರೋಪಿ. ಈಗ ಕಂಕನಾಡಿ- ಪಂಪ್‌ವೆಲ್ ಹಳೆ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನೆಲ ಅಂತಸ್ತಿನ ಕೊಠಡಿಯಲ್ಲಿ ‘ಹೆಲ್ಪ್‌ಲೈನ್ ಮಂಗಳೂರು’ ಎಂಬ ಹೆಸರಿನ ಕಚೇರಿಯನ್ನು ತೆರೆದು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದನು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಆರೋಪಿಯ ಬಳಿಯಿಂದ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್ ಕಾರ್ಡ್‌ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸೆಸೆಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ಪೊಲೀಸರು ವಶಪಡಿಸಿದ್ದಾರೆ. ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಬಳಸಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಆರೋಪಿಯಿಂದ ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್‌ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋ ಮೆಟ್ರಿಕ್ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಕಲಿ ದಾಖಲೆ ಪತ್ರ ತಯಾರಿಸುವ ಜಾಲದಲ್ಲಿ ಇನ್ನೂ ಕೆಲವು ಮಂದಿ ಪಾಲ್ಗೊಂಡರುವ ಶಂಕೆ ಇದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೆಎಸ್‌ಆರ್‌ಟಿಸಿಗೆ 130 ಹೊಸ ಬಸ್‌ಗಳನ್ನು ಸೇರ್ಪಡೆ: ಸಿಎಂ ಸಿದ್ದರಾಮಯ್ಯ ಚಾಲನೆ

Next Post

ಶಿಕ್ಷಕಿಯ ವಾಟರ್ ಬಾಟಲ್‌ಗೆ ಎಕ್ಸ್‌ಪೈರಿ ಡೇಟ್ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ಶಿಕ್ಷಕಿಯ ವಾಟರ್ ಬಾಟಲ್‌ಗೆ ಎಕ್ಸ್‌ಪೈರಿ ಡೇಟ್ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!

ಶಿಕ್ಷಕಿಯ ವಾಟರ್ ಬಾಟಲ್‌ಗೆ ಎಕ್ಸ್‌ಪೈರಿ ಡೇಟ್ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada