ಮೈಸೂರಿನಲ್ಲಿ ಮುಂದುವರಿದ ಮಾನವ ಕಾಡು ಪ್ರಾಣಿ ಸಂಘರ್ಷ ಮುಂದುವರಿದಿದ್ದು, ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕು ಮುದಗನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಸ್ಥಳೀಯ ನಿವಾಸಿ ಚಲುವಯ್ಯ(65) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ರಾಗಿ ಕಟಾವು ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿರಂತರ ಕಾಡು ಪ್ರಾಣಿ ಹಾವಳಿಯಿಂದ ರೈತರಲ್ಲಿ ಆತಂಕ ಎದುರಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು ರೈತರ ಒತ್ತಾಯಿಸಿದ್ದಾರೆ. ಅಲ್ಲದೇ ಕಾಡಾನೆ ಹಾವಳಿಯಿಂದಾಗಿ ಮನೆಯಿಂದ ಹೊರಗೆ ಬರಲು ಗ್ರಾಮಸ್ಥರು ಹೆದರುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಬೇಟಿ ನೀಡಿದ್ದರು.
#Elephant #WildAnimals #Hunsur #Farmerkilled #Forest
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ
ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
Read moreDetails