ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್

ಕೃಷಿಕಾಯ್ದೆಗಳ ವಿರುದ್ಧದ ರೈತರ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ರೈತ ಮುಖಂಡ ರಾಕೇಶ್ ಟಿಕಾಯತ್  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಜೂನ್ 9 ರಂದು ಕೋಲ್ಕತ್ತಾದಲ್ಲಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿಕಾಯ್ದೆಗಳ ವಿರುದ್ಧ ದೆಹಲಿಯ ಗಡಿಭಾಗಗಳಲ್ಲಿ ರೈತರು 6 ತಿಂಗಳಿಂದ  ನಿರಂತವಾಗಿ ಪ್ರತಿಭಟನೆ ನಡೆಸುತ್ತಿದ್ದು,  ಸರ್ಕಾರ ರೈತರ ಮನವೊಲಿಸುವ ಪ್ರಯತ್ನ ಮಾಡಿದರು ಅದು ಈಡೇರಲಿಲ್ಲ, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದ ರೈತರು ಈಗಾಗಲೇ ದೇಶಾದ್ಯಂತ ಒಗ್ಗಟ್ಟಿನಿಂದ ಸಾಕಷ್ಟು ಪ್ರತಿಭಟನೆ ಮಾಡಿದ್ದಾರೆ. ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಜೊತೆಗೆ  ರೈತ ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗಧಿ ಪಡಿಸುವ ಕಾನೂನು ಜಾರಿಯಾಗ ಬೇಕೆಂದು ಒತ್ತಾಯಿಸಲಾಗಿದೆ.

ಜೂನ್‌ 9 ರಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌  ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಲಿದ್ದಾರೆ. ಹಾಗು ರೈತರ ಹೋರಾಟವನ್ನು ದೇಶಾದ್ಯಂತ ತೀವ್ರಗೊಳಿಸುವ ಕುರಿತು ಚರ್ಚೆ ನಡೆಸಲಿದ್ದಾರೆಂದು ಎಎನ್‌ಐ ವರದಿ ಮಾಡಿದೆ. 2021 ರ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಟಿಕಾಯತ್‌ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಪ್ರಚಾರ ನಡೆಸಿದ್ದರು.

 ಮುಖ್ಯ ಮಂತ್ರಿ  ಮಮತಾ ಬ್ಯಾನರ್ಜಿ ಕೃಷಿ ಕಾಯ್ದೆಗಳನ್ನು ವಿರೋಧಿಸುವ ಮೂಲಕ ಆರಂಭದಿಂದಲೂ ರೈತರ ಪ್ರತಿಭಟನೆಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ.  ಕಳೆದ ವರ್ಷ ನವೆಂಬರ್‌ನಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಿಗೆ ಟಿಎಂಸಿಯ ಹಲವಾರು ಸಂಸದರು ಭೇಟಿ ನೀಡಿ ಬೆಂಬಲಿಸಿದ್ದರು. ಇದೀಗ ಕೋವಿಡ್‌ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ, ಹೋರಾಟವನ್ನು ತೀವ್ರಗೊಳಿಸಲು ರೈತ ಮುಖಂಡರು ಯೋಜಿಸುತ್ತಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...