
ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ ಸಿಗಲಿದೆ 3 ಕೋಟಿ ರೂ ಸಬ್ಸಿಡಿ: ಎನ್. ಚಲುವರಾಯಸ್ವಾಮಿ.
ಬೆಂಗಳೂರು, ಅಕ್ಟೋಬರ್ 09,
ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಯವರು ಆಭಿಪ್ರಾಯವ್ಯಕ್ತಪಡಿಸಿದರು..
ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ಕೃಷಿಯಿಂದ ಲಾಭ ಪಡೆಯುವ ಉದ್ದೇಶದಿಂದ ಸರ್ಕಾರ ಅನೇಕ ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಲಾಭ ಪಡೆಯುವ ಮೂಲಕ ರೈತ ಸಮೂದಾಯ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು..
PMFME ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತ ಉತ್ಪಾದಕ ಸಂಸ್ಥೆಗಳು (FPO) ಹಾಗು ಸದಸ್ಯರು, ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಸಂಸ್ಕರಣೆ ಮುಖಾಂತರ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ರೈತರಿಗೆ ಇದೇ ವೇಳೆ ಸಚಿವರು ಕರೆ ನೀಡಿದರು..

ಈ ಯೋಜನೆಯಡಿ ಸಾಮಾನ್ಯ ಮೂಲ ಸೌಕರ್ಯ ಸ್ಥಾಪನೆಗೆ ಶೇ.35 ಸಾಲ ಸಹಾಯಧನ ಅಥವಾ ಗರಿಷ್ಠ 3 ಕೋಟಿ ರೂ. ಸಬ್ಸಿಡಿ ಸಿಗಲಿದೆ. ಎಲ್ಲಾ FPO ಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಸಚಿವರು ತಿಳಿಸಿದರು..
PMFME ಯೋಜನೆಯ ಪ್ರಯೋಜನ ಪಡೆದುಕೊಂಡಿರುವವರ ಸಂಖ್ಯೆ ಬಹಳ ಕಡಿಮೆ ಇದೆ. ಈ ಯೋಜನೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಇಂದು ರೈತ ಉತ್ಪಾದಕರ ಸಮ್ಮೇಳನವನ್ನು ಕೆಪೆಕ್ ಅಧ್ಯಕ್ಷ ಹರೀಶ್ ಹಾಗು ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಆಯೋಜಿಸಿರುವುದು ನಿಜಕ್ಕೂ ಶ್ಲಾಘನಿಯ ಎಂದ ಸಚಿವರು ಹೇಳಿದರು..

ಈ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು, ಬ್ಯಾಂಕಿನ ಅಧಿಕಾರಿಗಳು ನಬಾರ್ಡ್ ಹಾಗು ವಿವಿಧ ವಿಷಯಗಳ ತಜ್ಞರು ಭಾಗವಹಿಸುತ್ತಿದ್ದು, ರೈತರು ಹಾಗು FPOಗಳು ಇದರ ಅನೂಕೂಲ ಪಡೆದುಕೊಂಡು ಸ್ವಾವಲಂಬಿಗಳಾಗುವಂತೆ ಸಚಿವರು ತಿಳಿಸಿದರು..
ಕಾರ್ಯಕ್ರಮದಲ್ಲಿ ಕೆಪೆಕ್ ಅಧ್ಯಕ್ಷ ಹರೀಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಜಂಟಿ ನಿರ್ದೇಶಕ ಡಾ.ಶಿವಕುಮಾರ್, ಅಶೋಕ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು..