• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
March 29, 2023
in Top Story, ಕರ್ನಾಟಕ, ರಾಜಕೀಯ
0
ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಮಾ.೨೯: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ ನಡೆಯುವ ಪ್ರಕ್ರಿಯೆ ಎಂದರು.

ಕಳೆದ ಒಂದು ವಾರದಿಂದ ಆಯೋಗದಿಂದ ಚುನಾವಣಾ ದಿನಾಂಕ ಪ್ರಕಟವಾಗುವ‌ ನಿರೀಕ್ಷೆ ಇತ್ತು, ಅದು ಈಗ ಘೋಷಣೆ ಆಗಿದೆ. ಎಲ್ಲರೂ ಚುನಾವಣೆಯ ಪಾವಿತ್ರ್ಯತೆ, ಪಾರದರ್ಶಕತೆ ಕಾಪಾಡುವುದರ ಎಲ್ಲಾ ಪಕ್ಷಗಳು ಹೇಳಿವೆ. ಆದರೆ, ಕಳೆದ ಹಲವು ದಿನಗಳಿಂದ ಹಲವು ಪಕ್ಷಗಳು ಮತದಾರರಿಗೆ ಆಮಿಷ ಒಡ್ಡುತ್ತಿವೆ. ಸಂಬಂಧಪಟ್ಟವರು ಅವರನ್ನು ಹಿಡಿಯುವ ಕೆಲಸ ಮಾಡಿದ್ದಾರೆ. ಇದರಲ್ಲಿ ರಾಷ್ಟ್ರೀಯ ಪಕ್ಷಗಳು ದೊಡ್ಡ ಮಟ್ಟದಲ್ಲಿ ವಾಚ್, ತವಾ‌, ಕುಕ್ಕರ್, ಸೇರಿ ಹಂಚಿದ್ದಾರೆ ಎಂದು ದೂರಿದರು ಅವರು. ಇಷ್ಟು ಪ್ರಮಾಣದಲ್ಲಿ ವಸ್ತುಗಳನ್ನು ವಶಕ್ಕೆ ಪಡೆದ ಮೇಲೆಯೂ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಈ ವ್ಯವಸ್ಥೆಯಲ್ಲಿ ಅವಕಾಶ ಇದೆ! ಇದೇ ನನಗೆ ಅಚ್ಚರಿ ಉಂಟು ಮಾಡುತ್ತಿದೆ. ಭ್ರಷ್ಟಾಚಾರ ಮುಕ್ತ ಅನ್ನೋದು‌ ಹೇಳೋದು ಸುಲಭ, ಆಚರಣೆ ಕಷ್ಟ ಎನ್ನುವುದು ಇದರಿಂದ ಅರ್ಥ ಆಗುತ್ತದೆ ಎಂದರು.

ಈ ವಿಚಾರದಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಎಲ್ಲಾ ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ. ಅದು ಒಳ್ಳೆಯ ಬೆಳವಣಿಗೆ. ಆದರೆ, ಕೆಲವು ಬಾರಿ‌ ಸಾರ್ವಜನಿಕರು ಸ್ವಂತ ಕೆಲಸಗಳಿಗೆ ಹಣ ತೆಗೆದುಕೊಂಡು ಹೋಗ್ತಾರೆ. ಅಂಥವರನ್ನು ಹಿಡಿದು ಹಣದ ದಾಖಲೆ ಕೇಳಿದರೆ‌ ಹೇಗೆ? ಅದನ್ನು ಆಯೋಗ ಮಾಡಬಾರದು. ರೈತರು, ಆಸ್ಪತ್ರೆಗಳಿಗೆ ಹೋಗುವವರಿಗೆ ತೊಂದರೆ ಕೊಡಬಾರದು ಎನ್ನುವುದು ನನ್ನ ಕಳಕಳಿ ಎಂದು ಅವರು ಹೇಳಿದರು.

ಇಂತಹ ವಿಷಯಗಳಲ್ಲಿ ಚುನಾವಣಾ ಆಯೋಗ ನೋಡಿ ತೀರ್ಮಾನ ಮಾಡಬೇಕು. ಜನ ಸಾಮಾನ್ಯರಿಗೆ ತೊಂದರೆ‌ ಆಗಬಾರದು. ಪ್ರಧಾ‌ನಿ‌ ಅವರು ನೋಡಿದರೆ ಯುದ್ಧೋಪಾದಿಯಲ್ಲಿ ಭ್ರಷ್ಟಾಚಾರ ನಿಂತಿದೆ‌‌ ಅಂತಾರೆ. ಎಲ್ಲಿ ನಿಂತಿದೆ? ಅಮಾಯಕರು‌ ಬಲಿಯಾಗಬಾರದು ಎಂದರು ಅವರು.

ಜೆಡಿಎಸ್ ಸಿದ್ಧತೆ ಪೂರ್ಣ: ಚುನಾವಣೆಗೆ ಜೆಡಿಎಸ್ ಪಕ್ಷದ ಸಿದ್ಧತೆ 50-60% ತಯಾರಿ ಮುಗಿದಿದೆ. ಇನ್ನೆರಡು ದಿನದಲ್ಲಿ ಎರಡನೇ ಪಟ್ಟಿಯೂ ಹೊರಬರಲಿದೆ. ನಾಮಪತ್ರ‌ ಪ್ರಕ್ರಿಯೆಗೆ ನಮ್ಮ ಅಭ್ಯರ್ಥಿಗಳು ಸಿದ್ಧರಿದ್ದಾರೆ. 123 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಗುರಿ‌‌ ಈಡೇರುತ್ತದೆ ಎನ್ನುವ ಅಚಲ ನಂಬಿಕೆ ನನಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ: ಮಂಡ್ಯದಲ್ಲಿ ನಾನು ಸ್ಪರ್ಧೆ ಮಾಡುವ ಅಗತ್ಯ ಇಲ್ಲ. ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಲು ಪಕ್ಷದಲ್ಲಿ ನಿರ್ಧಾರ ಆಗಿದೆ. ಆದರೆ, ಮಂಡ್ಯಕ್ಕೆ ಬರುವಂತೆ ಕೆಲವರು ಕೇಳಿದ್ದು ನಿಜ. ಆದರೆ, ಚನ್ನಪಟ್ಟಣದ ಕಾರ್ಯಕರ್ತರಿಗೆ ಅದರಿಂದ ಬೇರೆ ಸಂದೇಶ ಹೋಗುತ್ತದೆ. ಹಾಗೆ ಆಗುವುದು ಬೇಡ. ಹೀಗಾಗಿ ನಾನು ಒಂದೇ ಕಡೆ ಸ್ಪರ್ಧೆ ಮಾಡುತ್ತೇನೆ. ಈ ಸ್ಪಷ್ಟನೆ ಇದೆ ನಮಗೆ ಎಂದು ಅವರು ತಿಳಿಸಿದರು.

ಇವಿಎಂ ಮೇಲಿನ ಅನುಮಾನ ನಿವಾರಣೆ ಆಗಲಿ: ರಾಜ್ಯದಲ್ಲಿ ಹೊಸ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸುವ ಬಗ್ಗೆ ಚುನಾವಣಾ ಆಯೋಗ ಹೇಳಿದೆ. ಈ ಬಗ್ಗೆ ಏನು ಹೇಳುತ್ತೀರಿ ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಮತಯಂತ್ರಗಳ ಬಗ್ಗೆ ಇರುವ ಅನುಮಾನ ನಿವಾರಣೆಯಾಗಬೇಕು. ಜನಸಾಮಾನ್ಯರಲ್ಲಿ ಇರುವ ಅನುಮಾನ‌ ನಿವಾರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ, ಯಶವಂತಪುರ ಕ್ಷೇತ್ರದ ಅಭ್ಯರ್ಥಿ ಜವರಾಯಿ ಗೌಡ, ಹಿರಿಯ ಮುಖಂಡರಾದ ಶ್ರೀಕಾಂತ್ ಮುಂತಾದವರು ಉಪಸ್ಥಿತರಿದ್ದರು.

Tags: BJPCongress PartyElectionHDKhdkumarswamyJDSjdskarnatakaKarnataka CongressKarnataka GovernmentKarnataka Politicskarnatakaelectionkarnatakanewslatestnewsಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಟೈಗರ್ ಪ್ರಭಾಕರ್ ಹುಟ್ಟುಹಬ್ಬಕ್ಕೆ “ಲಂಕಾಸುರ” ಚಿತ್ರದ ವಿಶೇಷ ಟೀಸರ್ ರಿಲೀಸ್..!‌

Next Post

ಮಾಸ್‌ ಕಳೆದುಕೊಳ್ಳದ ಸಿದ್ದರಾಮಯ್ಯ: ಕಾಂಗ್ರೆಸ್‌ ಜಯಭೇರಿ ಎಂದ ಚುನಾವಣಾ ಸಮೀಕ್ಷೆ.!

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Next Post
ಮಾಸ್‌ ಕಳೆದುಕೊಳ್ಳದ ಸಿದ್ದರಾಮಯ್ಯ: ಕಾಂಗ್ರೆಸ್‌ ಜಯಭೇರಿ ಎಂದ ಚುನಾವಣಾ ಸಮೀಕ್ಷೆ.!

ಮಾಸ್‌ ಕಳೆದುಕೊಳ್ಳದ ಸಿದ್ದರಾಮಯ್ಯ: ಕಾಂಗ್ರೆಸ್‌ ಜಯಭೇರಿ ಎಂದ ಚುನಾವಣಾ ಸಮೀಕ್ಷೆ.!

Please login to join discussion

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!