• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿರ್ಬಂಧ ಖಂಡಿಸಿ ರೈತರಿಂದ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ಕರ್ನಾಟಕ
0
ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿರ್ಬಂಧ ಖಂಡಿಸಿ ರೈತರಿಂದ ಪ್ರತಿಭಟನೆ
Share on WhatsAppShare on FacebookShare on Telegram

ಕರ್ನಾಟಕದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಲಾಗಿದ್ದನ್ನು ಖಂಡಿಸಿ ರೈತರು ಇಂದು ಪ್ರತಿಭಟನೆ ವ್ಯಕ್ತವಾಗಿದೆ.

ADVERTISEMENT

ರಾಷ್ಟ್ರೀಯ ಹೆದ್ದಾರಿ ೨೦೯ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಭಾಗದ ರೈತರಿಗೆ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಈ ರಸ್ತೆಯು ಸುಮಾರು ೪೫ ಕಿಲೋಮೀಟರ್ ಕಾಡಿನ ಮಧ್ಯ ಹಾದುಹೋಗಿದೆ. ಈ ರಸ್ತೆಯಲ್ಲಿ ರಾತ್ರಿ ಸಂಚಾರದ ವೇಳೆ ಸಾಕಷ್ಟು ವನ್ಯಜೀವಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿದ್ದವು. ಹೀಗಾಗಿ ೨೦೧೯ ರಲ್ಲೇ ತಮಿಳುನಾಡು ಈ ರಸ್ತೆಯ ಕಲೆಕ್ಟರ್ ಇಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು. ಆದ್ರೆ ಇದೂವರೆಗೂ ಆದೇಶ ಪಾಲನೆಯಾಗಿರಲಿಲ್ಲ.

ಹೀಗಾಗಿ ತಮಿಳುನಾಡಿನ ಪರಿಸರವಾದಿಯೊಬ್ಬರು ಚೆನೈ ನ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ರು. ಸದ್ಯ ಇದಕ್ಕೆ ತೀರ್ಪು ನೀಡಿರುವ ಚೆನ್ನೈ ಹೈಕೋರ್ಟ್ ಇಂದಿನಿಂದ ರಾತ್ರಿ ಸಂಚಾರ ನಿರ್ಬಂಧಿಸಿದೆ. ಇದಕ್ಕೆ ಕರ್ನಾಟಕದ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಂದು ಕರ್ನಾಟಕದ ಗಡಿಭಾಗದ ಪುಣಜನೂರು ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಯಿತು.

ರೈತ ಸಂಘಟನೆ ಜೊತೆ ಲಾರಿ ಮಾಲೀಕರ ಸಂಘದವರು ಪ್ರತಿಭಟನೆ ನಡೆಸಿದರು. ರಾತ್ರಿ ವೇಳೆ ಕೇವಲ ರೈತರು ಬೆಳೆದ ತರಕಾರಿ,ಹೂವು, ಹಣ್ಣು, ವಾಹನಗಳಿಗೆ ನಿರ್ಬಂಧ ಸಡಿಲಿಸಲಿ ಎಂದು ಒತ್ತಾಯ ಮಾಡಿದರು. ಇಲ್ಲದೇ ಹೋದ್ರೆ ರೈತರು ಬೆಳೆದ ಬೆಳೆ ಸೂಕ್ತ ಸಮಯಕ್ಕೆ ಮಾರುಕಟ್ಟೆ ತಲುಪಿವುದಿಲ್ಲ. ಇದರಿಂದ ಅವರು ಬೆಳೆದ ಬೆಳೆಗೆ ಲಾಭ ಸಿಗುವುದಿಲ್ಲ. ಹೀಗಾಗಿ ತಮಿಳುನಾಡು ಹೈಕೋರ್ಟ್ ನೀಡಿರುವ ತೀರ್ಪು ರೈತರಿಗೆ ಮಾರಕವಾಗಿದೆ. ಆದ್ದರಿಂದ ಇದನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು.

ಕರ್ನಾಟಕದ ಭಾಗದಲ್ಲಿ ಪುಣಜನೂರು ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ವಾಹನ ತಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಕರ್ನಾಟಕದ ಕಡೆಯ ವಾಹನಗಳು ಅರಣ್ಯ ಪ್ರದೇಶದಲ್ಲಿ ನಿಲ್ಲುವಂತಾಗಿತ್ತದೆ. ಇದರಿಂದ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಒತ್ತಡ ಬೀಳಲಿದೆ. ಹೀಗಾಗಿ ಕರ್ನಾಟಕ ಸರ್ಕಾರ ಯಾವ ರೀತಿಯ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags: BJPCovid 19ಕರೋನಾಕೋವಿಡ್-19ಬಿಜೆಪಿರಾತ್ರಿ ಸಂಚಾರರಾಷ್ಟ್ರೀಯ ಹೆದ್ದಾರಿ 209
Previous Post

ಯತ್ನಾಳ್‌ಗೆ ಚಡ್ಡಿ ಬಿಚ್ಚಿ ಹೊಡೆಯದಿದ್ದರೆ ನಾನು ಇಸ್ಮಾಯಿಲ್ ಅಲ್ಲ: ತಮಟಗಾರ ಎಚ್ಚರಿಕೆ

Next Post

ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada