ಬಾಗಲಕೋಟೆ: ಕಬ್ಬಿನ ದರ ನಿಗದಿ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ರೈತರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರತಿಭಟನಾಕಾರರು ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಎರಡು ಗುಂಪಿನ ರೈತರು ಹೋರಾಟಕ್ಕಿಳಿದಿದ್ದರು. ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರ ಜೊತೆ ಮಾತುಕತೆಗೆ ಬಾರದ ಕಾರಣ ಗೋದಾಮಿಗೆ ಕೊಂಡೊಯ್ಯುತ್ತಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇನ್ನು ಈ ವೇಳೆ ಎರಡು ಗುಂಪಿನ ರೈತರ ನಡುವೆಯೇ ಮನಸ್ತಾಪ ಬಂದಿದ್ದು, ಪರಸ್ಪರ ಬೈದುಕೊಂಡಿದ್ದಾರೆ. ಈ ವೇಳೆ ಏಕಾಏಕಿ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಕೆಲ ಕಿಡಿಗೇಡಿಗಳು ರೈತರು ತಂದಿದ್ದ ಹಾಗೂ ಕಾರ್ಖಾನೆ ಬಳಿ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಕೂಡಲೇ ಕಾರ್ಯಾಚರಣೆ ತೀವ್ರಗಗೊಳಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.


