• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram


ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ADVERTISEMENT

ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.

ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ

ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ಎಂದರು.

ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ.ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲಾ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯ ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದರು.

ನಮ್ಮ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಮಂಡ್ಯ ಜಿಲ್ಲೆಯ 18 ಕೋಟಿ ಜನ ಮಹಿಳೆಯರು ಶಕ್ತಿ ಯೋಜನೆ ಅಡಿ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ ಕಬ್ಬಿನ ಗುಣಮಟ್ಟ ಹೆಚ್ಚಿಸಿ ಎಂದು ಹೇಳಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಮಾತನಾಡಿ ಪ್ರತಿ ವರ್ಷ ವಿ.ಸಿ ಫಾರಂ ನಲ್ಲಿ ಕೃಷಿ ಮೇಳ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ ಸದರಿ ವರ್ಷ ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ಮೊದಲ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳ 2025 ರಲ್ಲಿ ಹೆಚ್ಚಿನ ಕೃಷಿ ತಳಿಗಳು, ತಂತ್ರಜ್ಞಾನಗಳನ್ನು ಆಧುನಿಕ ಯಂತ್ರೋಪಕರಣಗಳನ್ನು ಮೇಳದಲ್ಲಿ ಇರಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಲಾಗಿದ್ದ ಕೃಷಿ ಮೇಳದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಭಾಗಿಯಾಗುತ್ತಾರೆ ಎಂದು ಹೇಳಿದರು.

1939 ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕ್ಕರೆ ಜಾಗದಲ್ಲಿ ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲಾ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.

ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5 ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ. ಮೊದಲ ವರ್ಷದಲ್ಲೇ ಯು.ಜಿ.ಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008 ರಲ್ಲಿ ಅನುಮತಿ ದೊರೆತಿತ್ತು ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013 ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.

ಬೆಳಗಾವಿಯಲ್ಲಿ ಆದ ಬೆಳೆ ನಾಶಕ್ಕೆ ಎನ್ ಡಿ ಆರ್ ಎಫ್ ಪರಿಹಾರದ ಮೊತ್ತದ ಜೊತೆಗೆ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿತು. ರಾಜ್ಯ ಕಬ್ಬು ಬೆಳೆಗಾರರ ಆರ್ಥಿಕ ಅಭಿವೃದ್ಧಿಗಾಗಿ ಟನ್ ಕಬ್ಬಿಗೆ ರೂ.50 ಅನ್ನು ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಡವರು, ರೈತರು, ಶ್ರಮಿಕರು, ಮಹಿಳೆಯರು ಮತ್ತು ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರ ರಾಜ್ಯದ ಜನರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ನೀಡಿಕೊಂಡು ಬರುತ್ತಿದೆ. ರೈತರನ್ನು ಆರ್ಥಿಕವಾಗಿ ಸಫಲರನ್ನಾಗಿಸಲು ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಮಹತ್ವ ಎಲ್ಲರಿಗೂ ಮುಂದಿನ ದಿನಗಳಲ್ಲಿ ತಿಳಿಯುತ್ತದೆ ಎಂದು ತಿಳಿಸಿದರು.

ಫಿಲಿಪೈನ್ಸ್ ಅಂತರಾಷ್ಟ್ರೀಯ ರೈಸ್ ರಿಸರ್ಚ್ ಸೆಂಟರ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡು ರೋಗನಿರೋಧಕ ಭತ್ತದ ತಳಿಗಳನ್ನು ನಮ್ಮಲ್ಲಿ ಬೆಳೆಯಲಾಗುವುದು. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಪೀಠೋಪಕರಣಗಳ ಅಭಿವೃದ್ಧಿಗಾಗಿ ರೂ 100 ಕೋಟಿ ಮಾನ್ಯ ಮುಖ್ಯಮಂತ್ರಿಗಳು ಮಂಜೂರು ಮಾಡಿದ್ದಾರೆ. ಜಿಲ್ಲೆಯ ಜನತೆ ಹೇಗೆ ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು ಎಂಬುದರ ಕುರಿತಾಗಿ ಕೃಷಿ ಮೇಳ ಆಯೋಜಿಸಲಾಗಿದೆ ರೈತರು ಇದರಲ್ಲಿ ಭಾಗವಹಿಸಿ ಕೃಷಿ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಧ್ಯಕ್ಷತೆವಹಿಸಿ ಮಾತನಾಡಿ ಈ ಭಾಗಕ್ಕೆ ವಿಶ್ವವಿದ್ಯಾಲಯ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ತಿಳಿಸಿದರು. ಮಣ್ಣಿನ ಗುಣಮಟ್ಟವನ್ನು ಕಾಪಾಡುವ ಹಾಗೂ ಕಡಿಮೆ ನೀರು ಬಳಕೆ ಮಾಡಿ ಹೆಚ್ಚು ಇಳುವರಿ ಪಡೆಯಬಹುದು. ಕೃಷಿ ಮೇಳದಲ್ಲಿ ಅನೇಕ ಹೊಸ ತಳಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ ಇದನ್ನು ರೈತರು ತಮ್ಮ ಬೇಸಾಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ರೈತರ ಜೀವನವನ್ನು ಸುಧಾರಿಸುವುದು ಬಹಳ ಮುಖ್ಯ. ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹೆಚ್ಚಿನ ಪ್ರಶಸ್ತ್ಯ ನೀಡಬೇಕು . ರೈತರು ಸಮಗ್ರ ಕೃಷಿ ಜೊತೆಗೆ ಉಪ ಉತ್ಪನ್ನ ಮಾಡುವುದು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬೇಕು ಎಂದರು.

ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಭಿವೃದ್ಧಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಕತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕೃಷಿ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: CM Siddaramaiahcm siddaramaiah and dk shivakumarcm siddaramaiah breakfastcm siddaramaiah breakfast meetcm siddaramaiah dk shivakumar breakfast meetingcm siddaramaiah eating nati kolicm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dcm dk shivakumarcm siddaramaiah vs dk shivakumarkarnataka cm siddaramaiahkarnataka cm siddaramaiah castsiddaramaiahsiddaramaiah news
Previous Post

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

Next Post

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada