• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜೂನ್ 05 ರೈತರಿಂದ ಸಂಪೂರ್ಣ ಕ್ರಾಂತಿ ದಿವಸ್ ಆಚರಣೆ- ಬಿಜೆಪಿ ಶಾಸಕರು, ಸಂಸದರ ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಧಾರ -SKM

Any Mind by Any Mind
June 4, 2021
in ದೇಶ
0
ಜೂನ್ 05 ರೈತರಿಂದ ಸಂಪೂರ್ಣ ಕ್ರಾಂತಿ ದಿವಸ್ ಆಚರಣೆ- ಬಿಜೆಪಿ ಶಾಸಕರು, ಸಂಸದರ ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಧಾರ -SKM
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿದ್ದು, ದೆಹಲಿಯ ಗಡಿಭಾಗಗಳಲ್ಲಿ 2020  ನವೆಂಬರ್‌ ತಿಂಗಳಿಂದ ಆರಂಭವಾದ ರೈತ ಹೋರಾಟ ಇಲ್ಲಿಯವರೆಗೂ ಮುಂದುವರೆದಿದೆ. ಕಳೆದ ವರ್ಷ ಜೂನ್‌ 5 ರಂದು ಮೂರು ಕೃಷಿಕಾನೂನುಗಳನ್ನು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದ ದಿವಸ. ಈ ಸಂಬಂಧ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿ ಸಂಸದರು ಮತ್ತು ಶಾಸಕರ ಕಚೇರಿಗಳ ಮುಂದೆ ಕೃಷಿ ಕಾನೂನು ಪ್ರತಿಗಳನ್ನು ಸುಟ್ಟು ಜೂನ್‌ 5 ರಂದು`ಸಂಪೂರ್ಣ ಕ್ರಾಂತಿ ದಿನವನ್ನಾಗಿ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆನೀಡಿದೆ.

ADVERTISEMENT

ಕೇಂದ್ರ ಸರ್ಕಾರ ಮೊದಲಿಗೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ 3 ಕೃಷಿ ಕಾಯ್ದೆಗಳು 2020 ಸೆಪ್ಟೆಂಬರ್‌ನಲ್ಲಿ  ಸಂಸತ್ತಿನಲ್ಲಿ ಅಂಗೀಕರಿಸಿತು, ರಾಷ್ಟ್ರಪತಿ ಕೂಡ ಸಹಿ ಹಾಕಿ ಅನುಮೋದನೆ ನೀಡಿದ್ದರು. ಆದರೆ ಈ ಕಾಯ್ದೆಗಳಿಂದ ತಮಗಾಗುವ ನಷ್ಟವನ್ನು ತಿಳಿದ ರೈತರು ದೇಶಾದ್ಯಂತ ರೈತ ಸಂಘಗಳು  ಒಗ್ಗೂಡಿ ಒಕ್ಕೊರಳಿನಿಂದ ಧ್ವನಿ ಎತ್ತಿದ್ದಾರೆ. ಸರ್ಕಾರ ರೈತರ ಮನವೊಲಿಸುವ ಪ್ರಯತ್ನ ನಡೆಸಿದ್ದರು ವಿಫಲವಾಗಿದ್ದು, ಕಾನೂನು ಹಿಂಪಡೆಯುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ ಎಂಬುವುದು ಪ್ರತಿಭಟನಾ ನಿರತ ರೈತರ ಮಾತಾಗಿದೆ.  ಕಳೆದ ನವೆಂಬರ್ ನಿಂದ   ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ಸ್ವಂತ ಮನೆಗಳನ್ನು ತೊರೆದು ದೆಹಲಿಯ ಗಡಿಭಾಗಗಳಲ್ಲಿ ಬೀಡು ಬಿಟ್ಟಿದ್ದಾರೆ.

 ಜೂನ್‌ 5 2020  ಕೇಂದ್ರ ಸರ್ಕಾರ ಮೊದಲಿಗೆ ಸುಗ್ರೀವಾಜ್ಞೆ ಮೂಲಕ ಕೃಷಿಕಾಯ್ದೆಗಳನ್ನು ಜಾರಿಗೆ ತಂದ ಕರಾಳ ದಿನ ಒಂದೆಡೆಯಾದ್ರೆ, ಜೂನ್‌ 5  1974 ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರು ʼಸಂಪೂರ್ಣ ಕ್ರಾಂತಿ’ ದಿವಸ ಎಂದು ಘೋಷಿಸಿ ಅಂದಿನ ಕೇಂದ್ರ ಸರ್ಕಾರದಿಂದಾದ ಅನ್ಯಾಯದ ವಿರುದ್ಧ ಆಂದೋಲನ ಆರಂಭಿಸಿ,  ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಪ್ರತಿ ಹಳ್ಳಿಯಲ್ಲೂ `ಜನತಾ ಸರ್ಕಾರ್’ ರಚಿಸಿದ್ದರು. ಆದರ ನೆನಪಿಗೆ ಸಂಯುಕ್ತ ಕಿಸಾನ್ ಮೋರ್ಚಾ ಹೊಸ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಸಂಯುಕ್ತ ಕಿಸಾನ್ ಮೋರ್ಚಾ ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಜೂನ್ 5 ರಂದು ದೇಶಾದ್ಯಂತ ‘ಸಂಪೂರ್ಣ ಕ್ರಾಂತಿ ದಿವಾಸ್’ ಆಚರಿಸಲಾಗುವುದು ಎಂದು ತಿಳಿಸಿದೆ. ಹೊಸ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಬಿಜೆಪಿ ಸಂಸದರು, ಶಾಸಕರು ಮತ್ತು ಜನ ಪ್ರತಿನಿಧಿಗಳ ಕಚೇರಿಗಳ ಮುಂದೆ ಸುಡುವಂತೆ  ನಾಗರಿಕರಿಗೆ ಮತ್ತು ರಾಜ್ಯಗಳ ರೈತ ಸಂಘಟನೆಗಳಿಗೆ  ಮನವಿ ಮಾಡಿದೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಲು ತಿಳಿಸಿದೆ.

Previous Post

ಪುರುಷ ಪ್ರಧಾನ ವ್ಯವಸ್ಥೆಯಲ್ಲಿನ ನ್ಯಾಯದ ಕಲ್ಪನೆ ಮತ್ತು ಹೆಣ್ಣಿನ ಸುರಕ್ಷತೆಯ ಆತಂಕ

Next Post

ಕರೋನಾ ಲಸಿಕೆ ವಿತರಣೆ: ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ –ಕಾಂಗ್ರೆಸ್‌

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಕರೋನಾ ಲಸಿಕೆ ವಿತರಣೆ: ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ –ಕಾಂಗ್ರೆಸ್‌

ಕರೋನಾ ಲಸಿಕೆ ವಿತರಣೆ: ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ –ಕಾಂಗ್ರೆಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada