• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪ್ಪ-ಮಗನಿಗೆ ಬಂಧನದ ಭೀತಿ, ಕಾಲಾವಕಾಶ ಮನವಿ ತಿರಸ್ಕರಿಸಿದ SIT..

Krishna Mani by Krishna Mani
May 2, 2024
in Top Story, ಇದೀಗ, ರಾಜಕೀಯ, ವಿಶೇಷ
0
ಅಪ್ಪ-ಮಗನಿಗೆ ಬಂಧನದ ಭೀತಿ, ಕಾಲಾವಕಾಶ ಮನವಿ ತಿರಸ್ಕರಿಸಿದ SIT..
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆ ಶುರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗು ಮಗ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಆಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ 7 ದಿನಗಳ ಕಾಲಾವಕಾಶ ಕೇಳಿದ್ದರು. ತಮ್ಮ ವಕೀಲರ ಮೂಲಕ ಪ್ರಜ್ವಲ್ ರೇವಣ್ಣ ಮಾಡಿಕೊಂಡಿದ್ದ ಮನವಿಯನ್ನು ತಿರಸ್ಕಾರ ಮಾಡಲಾಗಿದೆ.

ADVERTISEMENT

ಪ್ರಜ್ವಲ್ ರೇವಣ್ಣ ಮನವಿಯನ್ನು ತಿರಸ್ಕಾರ Reject ಮಾಡಿರೋ ಎಸ್ಐಟಿ ಟೀಂ, ಇದು ಗಂಭೀರವಾದ ಪ್ರಕರಣ, ಹೀಗಾಗಿ ಕಾಲಾವಕಾಶ ಕೋಡಲು ಸಾಧ್ಯವಿಲ್ಲ ಎಂದಿದೆ. 9 ದಿನಗಳ ಅವಧಿಯಲ್ಲಿ ಒಟ್ಟು ಮೂರು ನೊಟೀಸ್ ನೀಡಲು ತನಿಖಾಧಿಕಾರಿಗೆ ಅವಕಾಶ ಇದ್ದು, ಈಗಾಗಲೇ ನೊಟೀಸ್ ನೀಡಿ ಮೂರು ದಿನಗಳು ಆಗಿರುವ ಹಿನ್ನೆಲೆಯಲ್ಲಿ ಇಂದು ಎರಡನೇ ನೋಟಿಸ್ ನೀಡಲು ನಿರ್ಧಾರ ಮಾಡಲಾಗಿದೆ. ‌

ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮೂ ದಿನಗಳು ಕಳೆದಿವೆ. ಆದರೆ ರೇವಣ್ಣ ಹಾಗು ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳು ಕಾಣ್ತಿಲ್ಲ. ಹೀಗಾಗಿ ಎರಡನೇ ನೊಟೀಸ್ ನೀಡಿ ವಿಚಾರಣೆಗೆ ಕರೆಯುವುದು, ಒಂದು ವೇಳೆ ಮೂರು ನೋಟಿಸ್ಗೂ ಬಾರದೆ ಇದ್ದರೆ ಅರೆಸ್ಟ್ ಮಾಡಿ ಕರೆತರುವುದಕ್ಕೂ ಚಿಂತನೆ ನಡೆದಿದೆ ಎನ್ನಲಾಗ್ತಿದೆ.

ಬುಧವಾರ ಹಾಸನದಿಂದ ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗು ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬೇರೆ ಕುಟುಂಬದ ಸದಸ್ಯರ ಜೊತೆಗೂ ಮಾತುಕತೆ ಮಾಡಿದ್ದಾರೆ. ರೇವಣ್ಣ ವಿರುದ್ಧ ಮಹಿಳೆ ನೀಡಿರೋ ಲೈಂಗಿಕ ಕಿರುಕುಳ ದೂರಿನಲ್ಲಿ ರೇವಣ್ಣ ಎ1 ಆರೋಪಿ ಆಗಿದ್ದು, ಇಂದು ವಿಚಾರಣೆಗೆ ಹಾಜರಾಗ್ತಾರಾ..? ಅಥವಾ ಕಾನೂನು ಹೋರಾಟದ ಮೊರೆ ಹೋಗ್ತಾರಾ..? ಅನ್ನೋದು ಗೊತ್ತಾಗಬೇಕಿದೆ.

ಏಪ್ರಿಲ್ 30 ರಂದು ರೇವಣ್ಣ ಹಾಗು ಪ್ರಜ್ವಲ್ ರೇವಣ್ಣಗೆ SIT ಸಿಬ್ಬಂದಿ ನೊಟೀಸ್ ನೀಡಿದ್ದರು. ಆದರೆ ನಾನು ಹೊರದೇಶದಲ್ಲಿ ಇರುವ ಕಾರಣಕ್ಕೆ ವಿಚಾರಣೆಗೆ ಹಾಜರಾಗಲು ಕನಿಷ್ಟ ಏಳು ದಿನಗಳ ಸಮಯಾವಕಾಶ ಬೇಕು ಎಂದು ಕೋರಿದ್ದರು. ಪ್ರಜ್ವಲ್ ರೇವಣ್ಣ ಮನವಿಗೆ ಎಸ್ಐಟಿ ಸೊಪ್ಪು ಹಾಕಿಲ್ಲ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗಲು ನೋಟಿಸ್ನಲ್ಲಿ ತಿಳಿಸಲಾಗಿತ್ತು. ಆದರೆ ರೇವಣ್ಣ, ಪ್ರಜ್ವಲ್ ರೇವಣ್ಣ ಯಾರೊಬ್ಬರೂ ತನಿಖಾಧಿರಿ ಎದುರು ಹಾಜರಾಗಿಲ್ಲ.

Tags: BJPCongress PartyPrajwal RevannaSITಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಲ್ಯಾಣ ಕರ್ನಾಟಕದಲ್ಲಿ 5 ಸೀಟು ನಾವೇ ಗೆಲ್ತೀವಿ..!

Next Post

ಅವನು 420 ಅಂತ ನಾನ್ ಹೇಳಿದ್ರೆ ತೋರಿಸು?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಅವನು 420 ಅಂತ ನಾನ್ ಹೇಳಿದ್ರೆ ತೋರಿಸು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada