• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಗನ ಸಿನಿ “ರೈಡ್” ಗೆ ಅಪ್ಪನ ಸಾಥ್

ಪ್ರತಿಧ್ವನಿ by ಪ್ರತಿಧ್ವನಿ
September 5, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳು ಯಶಸ್ವಿಯಾಗಿರುವುದೆ ಹೆಚ್ಚು. ಅಂತಹ ವಭಿನ್ನ ಕಂಟೆಂಟ್ ನೊಂದಿಗೆ ಹೊಸತಂಡವೊಂದು ಮಾಡಿರುವ ಹೊಸ ಚಿತ್ರ “ರೈಡ್“. ಇತ್ತೀಚೆಗೆ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ, ‘ಕೆರೆಭೇಟೆ‘ ಚಿತ್ರದ ಖ್ಯಾತಿಯ ಗೌರಿಶಂಕರ್, ಚೇತನ್, ವೇಣು, ತಿಮ್ಮೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ನಿರ್ಮಾಪಕ ಉಮಾಪತಿ ಚಿತ್ರ ಯಶಸ್ವಿ ಯಾಗಲಿ ಎಂದು ಹಾರೈಸಿದರು.

ADVERTISEMENT

ರಾಮಕೃಷ್ಣ ರಾಮೋಹಳ್ಳಿ ಶ್ರೀವರಸಿದ್ದಿ ವಿನಾಯಕ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಮೂಲಕ ತಮ್ಮ ಪುತ್ರ ವೆಂಕಿ ಅವರನ್ನು ನಾಯಕನಟನಾಗಿ ಚಿತ್ರರಂಗ ಪ್ರವೇಶ ಮಾಡಿಸುತ್ತಿದ್ದಾರೆ. ನೂತನ ಪ್ರತಿಭೆ ತನ್ವಿ‌ “ರೈಡ್” ಚಿತ್ರದ ನಾಯಕಿ.ಯೂಟ್ಯೂಬರ್ ಆಗಿ ಹೆಸರು ಮಾಡಿರುವ ನೀರಜ್ ಕುಮಾರ್ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈವರೆಗೂ ಕೆಲವು ನಿರ್ದೇಶಕರ ಬಳಿ ಅಸಿಸ್ಟೆಂಟ್ ಆಗಿ ಕಾರ್ಯ ನಿರ್ವಹಿಸಿದ್ದ ನನಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಇದೊಂದು ಥ್ರಿಲ್ಲರ್ ಕಥಾಹಂದರ ಹೊಂದಿರುವ, ಮನೆಮಂದಿಯಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ. ಮನೆಯಲ್ಲಿ ಹಿರಿಯರನ್ನು ಮದುವೆಗೆ ಒಪ್ಪಿಸಿದ ಯುವಪ್ರೇಮಿಗಳು ಜಾಲಿ “ರೈಡ್” ಗೆ ಹೋಗುತ್ತಾರೆ‌. ಆ “ರೈಡ್” ನಲ್ಲಿ ಹಲವು ತಿರುವುಗಳಿರುತ್ತದೆ‌.ಇದೇ ಚಿತ್ರದ ಕಥಾಹಂದರ. ವೆಂಕಿ ಹಾಗೂ ತನ್ವಿ ನಾಯಕ – ನಾಯಕಿಯಾಗಿ, ನೀರಜ್ ಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ಬೆಂಗಳೂರು, ಚಿಕ್ಕಮಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದರು.

ನಾನು ಮೂಲತಃ ಸಿವಿಲ್ ಎಂಜಿನಿಯರ್. ನಟ ಆಗಬೇಕೆಂಬುದು ನನ್ನ ಕನಸು. ಆ ಕನಸಿಗೆ ಆಸರೆಯಾದವರು ನನ್ನ ತಂದೆ ರಾಮಕೃಷ್ಣ ರಾಮೋಹಳ್ಳಿ. ಈ ಚಿತ್ರದಲ್ಲಿ ನಾನು ಯುವಪ್ರೇಮಿ. ಪ್ರೇಯಸಿಯ ಒತ್ತಾಯದ ಮೇಲೆ “ರೈಡ್” ಹೋದಾಗ ಏನೆಲ್ಲಾ ಆಗುತ್ತದೆ ಎನ್ನುವುದೇ ಕಥೆ ಎಂದರು ನಾಯಕ ವೆಂಕಟೇಶ್.

ನನ್ನದು ಇದು ಮೊದಲ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕಿ ತನ್ವಿ. ಯೂಟ್ಯೂಬರ್ ಆಗಿ ಚಿತ್ರರಂದಲ್ಲಿ ಪರಿಚಿತನಾಗಿರುವ ನನಗೆ ನಟನಾಗಿ ಇದು ಮೊದಲ ಚಿತ್ರ. ನನ್ನ ಹೊಸಪಯಣಕ್ಕೆ ‌ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ನೀರಜ್ ಕು‌ಮಾರ್ ತಿಳಿಸಿದರು.

Tags: #film are #film #movie #cinema #movies #photography #filmphotography #actor #art #filmmaking #cinematography #love #films #mm ...Music director Sendil KumarProducer Umapati
Previous Post

ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ:ಸಿಎಂ ಸಿದ್ದರಾಮಯ್ಯ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ:ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada