• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಜ್ಯಾದ್ಯಂತ ಫೆಬ್ರವರಿಯಿಂದ ನೈಟ್ ಕರ್ಪ್ಯೂ ಇಲ್ಲ: ಹೊಸ ಮಾರ್ಗ ಸೂಚಿ ಪ್ರಕಟ

Any Mind by Any Mind
January 29, 2022
in Uncategorized
0
ರಾಜ್ಯಾದ್ಯಂತ ಫೆಬ್ರವರಿಯಿಂದ ನೈಟ್ ಕರ್ಪ್ಯೂ ಇಲ್ಲ: ಹೊಸ ಮಾರ್ಗ ಸೂಚಿ ಪ್ರಕಟ
Share on WhatsAppShare on FacebookShare on Telegram
ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ನಿಯಂತ್ರಣ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ಶೇ.50ರ ಮಿತಿ, ನೈಟ್ ಕರ್ಪ್ಯೂ ರದ್ದುಪಡಿಸಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಕಂದಾಯ ಸಚಿವ ಆರ್ ಅಶೋಕ್, “ರಾಜ್ಯದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಕೆಲ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು” ಎಂದರು.

ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ. ಮತ್ತು ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು. ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು. ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ. 50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್ 19 ಸ್ಥಿತಿಗತಿ ಸಭೆಯ ಪ್ರಮುಖ ಅಂಶಗಳು

೧ ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.
೨ ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ. ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.
೩ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.
೪ ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
೫ ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
೬ ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
೭ ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.
೮ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.
೯ ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ರಾಜ್ಯಾದ್ಯಂತ ಫೆಬ್ರವರಿಯಿಂದ ನೈಟ್ ಕರ್ಪ್ಯೂ ಇಲ್ಲ: ಹೊಸ ಮಾರ್ಗ ಸೂಚಿ ಪ್ರಕಟ | R Ashok | Covid19 | Corona
Previous Post

ಸಿಎಂ ಬೊಮ್ಮಾಯಿ 6 ತಿಂಗಳ ಸಾಧನೆಯು ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಅಲ್ಲ ಅದು ವಿನಾಶದ ಹೆಜ್ಜೆಗಳು : ಸಿದ್ದರಾಮಯ್ಯ ಲೇವಡಿ

Next Post

ಸಿಎಂ ಬೊಮ್ಮಾಯಿ ಕೋವಿಡ್ ಸಭೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಘೋಷಿಸಿದ ಸಂಸದ ಡಿ.ಕೆ.ಸುರೇಶ್

Related Posts

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ
Uncategorized

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

by ಪ್ರತಿಧ್ವನಿ
April 29, 2026
0

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ‘ಸಾಧನಾ ಸೌರಭ’ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಪತ್ರಕರ್ತ ದಿವಂಗತ ರವಿ ಬೆಳೆಗೆರೆ ಕುರಿತು ತೀವ್ರ...

Read moreDetails
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
Next Post
ಸಿಎಂ ಬೊಮ್ಮಾಯಿ ಕೋವಿಡ್ ಸಭೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಘೋಷಿಸಿದ ಸಂಸದ ಡಿ.ಕೆ.ಸುರೇಶ್

ಸಿಎಂ ಬೊಮ್ಮಾಯಿ ಕೋವಿಡ್ ಸಭೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಘೋಷಿಸಿದ ಸಂಸದ ಡಿ.ಕೆ.ಸುರೇಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada