• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಟ: ಬಸವರಾಜ ಬೊಮ್ಮಾಯಿ

Any Mind by Any Mind
October 11, 2023
in Top Story, ಕರ್ನಾಟಕ
0
ಜನ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಟ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರೆಂಟ್ ಪಡೆಯುವುದು ನಮ್ನ ಹಕ್ಕು, ಅಕ್ಕಿ ಪಡೆಯುವುದು ನಮ್ಮ ಹಕ್ಕು. ಕಾಂಗ್ರೆಸ್ ಸರ್ಕಾರ ನಮ್ಮ ಹಕ್ಕುಗಳನ್ನು ಕಿತ್ತು ಕೊಳ್ಳುತ್ತಿದೆ. ಕರೆಂಟ್ ಕೊಡುವುದು ಸರ್ಕಾರದ ಕರ್ತವ್ಯ. ಅದು ಅವರದೇನು ಉಪಕಾರ ಅಲ್ಲ. ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ ಹತ್ತು ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ.

ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಮೂರು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಇವರು ಸುಳ್ಳು ಹೇಳಿದ್ದಾರೆ. ಮೋಸ ಮಾಡಿದ್ದಾರೆ. ನಾವು ಡಿಸೆಂಬರ್ ವರೆಗೆ10 ಕೆಜಿ ಅಕ್ಕಿ ಕೊಟ್ಟಿದ್ದೇವು. ನಂತರ ಐದು ಕೆಜಿ ಅಕ್ಕಿ ಒಂದು ಕೆಜಿ ರಾಗಿ ಕೊಟ್ಟೆವು. ಆದರೂ, ನಮಗೆ ಆಶೀರ್ವಾದ ಮಾಡಲಿಲ್ಲ. ಮೂರು ಕೆಜಿ ಕೊಡುವ ಇವರನ್ನು ಏನು ಮಾಡಬೇಕು.

ಇವರ ವಿರುದ್ದ ಪ್ರತಿಭಟನೆ ಮಾಡಬೇಕಾ, ಬೇಡವಾ ? ಗೃಹ ಲಕ್ಷ್ಮೀ ಕೊಡುವುದಾಗಿ ಹೇಳಿದ್ದರು. ಈಗ ಹೆಣ್ಣು ಮಕ್ಕಳು ಬ್ಯಾಂಕ್ ಮುಂದೆ ಕ್ಯೂ ನಿಲ್ಲುವಂತಾಗಿದೆ.
ಸರ್ಕಾರ ರೈತರಿಗೆ ನಿರಂತರವಾಗಿ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ. ನೀವು ಎಷ್ಟು ಜನರ ಮೇಲೆ ಕೇಸ್ ಹಾಕುತ್ತೀರಿ, ಎಷ್ಟು ಜನರನ್ನು ಜೈಲಿಗೆ ಹಾಕುತ್ತಿರಿ ನೀವೇ ಬಿಟ್ಟು ಕಳುಹಿಸಬೇಕು ಅಷ್ಟು ಜನ ಜೈಲಿಗೆ ಹೋಗುತ್ತೇವೆ ಎಂದು ಗುಡುಗಿದರು.

ಚಿಕ್ಕಬಳ್ಳಾಪುರ ದಲ್ಲಿ 1.50 ಲಕ್ಷ ಪಂಪ್ ಸೆಟ್ ಗಳಿವೆ ಅವರಿಗೆ ವಿದ್ಯುತ್ ಇಲ್ಲದಿರುವುದರಿಂದ ಎಲ್ಲ ಬೆಳೆ ಒಣಗುತ್ತಿದೆ. ಡಾ. ಸುಧಾಕರ್ ಅವರು ಹೊರಾಟ ಮಾಡಿ ಚಿಕ್ಕಬಳ್ಳಾಪುರಕ್ಕೆ ಹಾಲು ಉತ್ಪಾದಕರ ಒಕ್ಕೂಟ ತಂದಿದ್ದಾರೆ. ಅದನ್ನು ರಾಜಕೀಯ ಕಾರಣಕ್ಕೆ ಸ್ಥಗಿತಗೊಳಿಸಿದ್ದಾರೆ. ಮೆಡಿಕಲ್ ಕಾಲೇಜ್ ತಂದಿದ್ದಾರೆ. ಅಂತಾರಾಷ್ಟ್ರೀಯ ಹೂವಿನ‌ ಮಾರುಕಟ್ಟೆ ತಂದಿದ್ದಾರೆ. ಸಧಾಕರ್ ಅವರು ಚುನಾವಣೆಯಲ್ಲಿ ಮೋಸಕ್ಕೆ ಬಲಿಯಾಗಿದ್ದಾರೆ. ಸೋಲು ಶಾಸ್ವತ ಅಲ್ಲ, ಗೆಲುವು ಶಾಸ್ವತ ಅಲ್ಲ. ಚಿಕ್ಕಬಳ್ಳಾಪುರಕ್ಕೆ ಶಾಸಕರು ಇದ್ದರೂ ಅನಾಥವಾಗಿದೆ. ಈಗಲೇ ಚುನಾವಣೆ ನಡೆದರೆ ಸುಧಾಕರ್ ಅವರು ಒಂದು ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ. ಈ ಜನ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

Tags: Basavaraj BommaichikkamagaluruDr. Sudhakar
Previous Post

ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಗೆ ಆಹ್ವಾನಿಸಿದ ಡಾ.ಎಚ್.ಸಿ.ಮಹದೇವಪ್ಪ

Next Post

ರಾಜಸ್ಥಾನ ಚುನಾವಣೆ ದಿನಾಂಕ ಪರಿಷ್ಕರಿಸಿದ ಚು. ಆಯೋಗ ; ನ.23ರ ಬದಲಿಗೆ 25ಕ್ಕೆ ಮತದಾನ!

Related Posts

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..
Top Story

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ...

Read moreDetails
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post
ಕೇಂದ್ರ ಚುನಾವಣಾ ಆಯೋಗದಿಂದ ಐದು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ!

ರಾಜಸ್ಥಾನ ಚುನಾವಣೆ ದಿನಾಂಕ ಪರಿಷ್ಕರಿಸಿದ ಚು. ಆಯೋಗ ; ನ.23ರ ಬದಲಿಗೆ 25ಕ್ಕೆ ಮತದಾನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada