
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಮುಂಭಾಗದಲ್ಲಿ 11 ಮಂದಿ ಕಾಲ್ತುಳಿತಕ್ಕೆ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ (Bjp) ಹೋರಾಟ ತೀವ್ರಗೊಳಿಸಲು ಮುಂದಾಗಿದ್ದು, ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬಿಜೆಪಿ ನಾಯಕರು ಇಂದಿನಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಬೆಳಿಗ್ಗೆ 11 ಘಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಈ ಪ್ರತಿಭಟನೆಯಲ್ಲಿ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗಿಯಾಗಲಿದ್ದಾರೆ.
ಕಾಲ್ತುಳಿತ ಪ್ರಕರಣದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವರ ಪರಮೇಶ್ವರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸಲು ಬಿಜೆಪಿ ನಾಯಕರೂ ನಿರ್ಧಾರ ಮಾಡಿದ್ದಾರೆ.ಈ ಘಟನೆಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ.ಇದರ ನೈತಿಕ ಹೊಣೆಯನ್ನು ಸರ್ಕಾರವೇ ಹೊರಬೇಕು.

ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರಲ್ಲಿ ಸಮನ್ವಯತೆ ಇಲ್ಲದೇ ಈ ಘಟನೆ ನಡೆದಿದೆ.ಹೀಗಾಗಿ ಸರ್ಕಾರದಲ್ಲಿ ಸಮನ್ವಯತೆ ಕೊರತೆಯಿಂದ ಅವಘಡ ಸಂಭವಿಸಿದೆ.ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಹೀಗಾಗಿ ಸಿಎಂ ಮತ್ತು ಡಿಸಿಎಂ ನೈತಿಕ ಹೊಣೆ ಹೊರಬೇಕು ಎಂದು ಬಿಜೆಪಿ ಒತ್ತಾಯಿಸಿದೆ.