ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬೆಂಗಳೂರಿನ ಖಾಸಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂರಿಗೆ ನೂಸುಳುಕೋರರು ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಂರಿಗೆ ಮರು ಹಂಚಿಕೆ ಮಾಡುತ್ತದೆ ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಧಾನಿಯ ಭಾಷಣ ಮುಸ್ಲಿಂರನ್ನು ನಿಂದಿಸುವಂತಿದೆ. ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.
ರಾಜಸ್ಥಾನದಲ್ಲಿ ನಡೆದಿದ್ದ ಸಮಾವೇಶದಲ್ಲಿಯೇ ಈ ರೀತಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 153ಎ, 153ಬಿ, 295ಎ, 503, 504, 505(2) ಅಡಿ ಪ್ರಕರಣ ದಾಖಲಿಸಿಕೊಳ್ಳಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶನ ನಾಡುವಂತೆ ಕೂಡ ಕೋರಲಾಗಿದೆ.
ಪ್ರಧಾನಿ ಮೋದಿ ದ್ವೇಷ ಭಾಷಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಸಾಮಾಜದಲ್ಲಿ ಕೋಮುದ್ವೇಷ ಉಂಟಾಗಬಹುದು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.