ನಟ ಕಿಚ್ಚ ಸುದೀಪ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಚರಣ್ ಹಾಗು ಅಹೋರಾತ್ರ ವಿರುದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ.ಹರೀಶ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಭಾರತೀಯ ಚಲನಚಿತ್ರರಂಗದ ಹೆಸರಾಂತ ಕಲಾವಿದ ಕಿಚ್ಚ ಸುದೀಪ್ ಅವತ ವಿರುದ್ದ ಅಹೋರಾತ್ರ ಹಾಗು ಚರಣ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ, ಅವಾಚ್ಯ ಪದಬಳಕೆ ಮಾಡುವ ಕನ್ನಡ ಚಿತ್ರರಂಗ ಹಾಗು ನಟ ಸುದೀಪ್ ಅವರ ಘನತೆಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡುತ್ತಿರುವುದು ಬೇಸರದ ಸಂಗತಿ.
ಇಂತಹ ಹೇಳಿಕೆಗಳಿಂದ ಕನ್ನಡ ಚಿತ್ರರಂಗ ಹಾಗು ಕಲಾವಿದರ ಬಗ್ಗೆ ಇಲ್ಲಸಲ್ಲದ ಗೊಂದಲಗಳಿಗೆ ಎಡೆ ಮಾಡಿಕೊಡಲಾಗುತ್ತಿದೆ. ಆದ, ಕಾರಣ ತಾವಯಗಳು ಅಹೋರಾತ್ರ ಹಾಗು ಚರಣ್ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಿ ಚಿತ್ರರಂಗ ಹಾಗು ಕಲಾವಿದರ ಬೆಳವಣಿಗೆಗೆ ಯಾವುದೇ ರೀತಿಯ ಚ್ಯತಿ ಬಾರದಂತೆ ಸಹಕರಿಸಬೇಕು ಎಂದು ತಾವು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆನ್ಲೈನ್ ಗೇಮಿಂಗ್ ವಿಚಾರವಾಗಿ ಸುದಿಫ್ ವಿರುದ್ದ ಅಹೋರಾತ್ರ ಹಾಗು ಚರಣ್ ಎಂಬುವ ವ್ಯಕ್ತಿಯೂ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.