ಬೇರೊಂದು ಮಹಿಳೆ ಜೊತೆ ಪತಿ ಚೆಲ್ಲಾಟವಾಡುತ್ತಿರುವುದನ್ನು ಪ್ರಶ್ನಿಸಿದ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಬಾಲಿವುಡ್ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಬೇರೊಬ್ಬ ಮಹಿಳೆ ಜೊತೆ ಇದಿದ್ದನ್ನು ಪ್ರಶ್ನಿಸಲು ಪತ್ನಿ ಮುಂದಾದಾಗ ಗಲಿಬಿಲಿಗೊಂಡ ಕಿಶೋರ್ ತಪ್ಪಿಸಿಕೊಳ್ಳುವ ಭರದಲ್ಲಿ ಪತ್ನಿಯ ಮೇಲೆ ಕಾರು ಹತ್ತಿಸಿದ್ದಾರೆ.
ಸದ್ಯ ಮಹಿಳೆಯ ತಲೆ, ಕಾಲು ಮತ್ತು ಕೈಗಳಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಅಂಬೋಲಿ ಠಾಣಾಧಿಕಾರಿ ತಿಳಿಸಿದ್ದಾರೆ.






