• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

ಪ್ರತಿಧ್ವನಿ by ಪ್ರತಿಧ್ವನಿ
December 1, 2024
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್
Share on WhatsAppShare on FacebookShare on Telegram

ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ

ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾದರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನು ಪ್ರಶ್ನಿಸಿದರು.

ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ . ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ . ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಹೇಳಿದ್ದಾರೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ . ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Tags: BJPChandrashekara SwamijiCongress PartyHD Devegowdahd kumarswamyJDSsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಡಳಿತಕ್ಕೆ ಹೊಸ ರೂಪ ಕೊಟ್ಟ ಶ್ರೇಷ್ಠ ನಾಯಕ ಕೆಂಗಲ್ ಹನುಮಂತಯ್ಯ:ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬ್ರಿಟನ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಹಾಡಿಹೊಗಳಿದ ಸಚಿವ ಸಂತೋಷ್‌ ಲಾಡ್‌

Related Posts

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ
ಅಂಕಣ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

by ಪ್ರತಿಧ್ವನಿ
April 12, 2026
0

-ನಾ ದಿವಾಕರ ( PUC ರಿಸಲ್ಟ್ ಬಂದಿದೆ. ಹೆಚ್ಚಿನ ಮಾರ್ಕ್ಸ್ ತೆಗೆದುಕೊಂಡು ಪಾಸ್ ಆದ ವಿದ್ಯಾರ್ಥಿಗಳನ್ನ ಹೊಗಳಿ ಹೊಗಳಿ ಹೊನ್ನ ಶೂಲಕ್ಕೇರಿಸಿ, ಆ ಮೂಲಕ ಫೇಲಾದವರ, ಕಡಿಮೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಬ್ರಿಟನ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಹಾಡಿಹೊಗಳಿದ ಸಚಿವ ಸಂತೋಷ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada