• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

Any Mind by Any Mind
May 25, 2023
in ರಾಜಕೀಯ
0
24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ
Share on WhatsAppShare on FacebookShare on Telegram

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲಾಗಿದೆ.ಸದ್ಯದ ಮಟ್ಟಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದು, ಕಲಂ 153, 153A, 505 ipcಯಂತೆ ಕೇಸದ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನ ಆರಂಭಿಸಿದ್ದಾರೆ.

ADVERTISEMENT

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ನಮಿತಾ ಕೆ.ಪೂಜಾರಿ ನೀಡಿದ ದೂರಿನ ಅನ್ವಯ ಶಾಸಕರ ವಿರುದ್ಧ ಕೇಸ್ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಅಷ್ಟಕ್ಕೂ ಈ ಘಟನೆಗೆ ಪ್ರಮುಖ ಕಾರಣ ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ಬಿಜೆಪಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ನೀಡಿದ್ದ ಅದೊಂದೇ ಒಂದು ಹೇಳಿಕೆ,

ಹೌದು ಸಿಎಂ ವಿರುದ್ಧ ಶಾಸಕ ಹರೀಶ್ ಪೂಂಜಾ ಕೊಲೆ ಆರೋಪವನ್ನ ಮಾಡಿದ್ರು. 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂಬ ಗಂಭೀರವಾದ ಆರೋಪ ಅದಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು ಮಾತ್ರವಲ್ಲದೆ, ಹರೀಶ್ ಪೂಂಜ ವಿರುದ್ಧ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು

ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ಪೂಂಜಾ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ರು. ಈ ವಿಡಿಯೋದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಪೂಂಜ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ.‌ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ ಎಂಬ ಮಾತನ್ನ ಹೇಳಿದ್ದಾರೆ ಇದು ವಿವಾದದ ಕೇಂದ್ರ ಬಿಂದುವಾಗಿದೆ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಅಂತ ತಮ್ಮ ಭಾಷಣದುದ್ದಕ್ಕೂ ಆಕ್ರೋಶ ವ್ಯಕ್ತ ಪಡಿಸಿದ್ರು.

ಹೀಗಾಗಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆ, ಹರೀಶ್ ಪೂಂಜಾ ವಿರುದ್ದ ಪುತ್ತೂರು, ಮಂಗಳೂರು ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಾಯಕರು ದೂರು ನೀಡಿದ್ರು. ಇದೀಗ ಇದರ ಪರಿಣಾಮವಾಗಿ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Tags: accused of murdering Hindu activistsBelthangadiBelthangadi MLA Harish PoonjaCM SiddaramaiahFIR against Poonjatuluತುಳುಪೂಂಜಾ ವಿರುದ್ಧ ಎಫ್​ಐಆರ್​ಬೆಳ್ತಂಗಡಿಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾಸಿಎಂ ಸಿದ್ದರಾಮಯ್ಯಹಿಂದೂ ಕಾರ್ಯಕರ್ತರ ಕೊಲೆ ಆರೋಪ
Previous Post

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Next Post

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada