ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಮನಿಮಿತ್ರಾ ಕಂಪನಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಸಂದರ್ಭದಲ್ಲಿ ನಟಿ ನಯನಾ ಮಾತನಾಡುವ ಭರದಲ್ಲಿ ಶೋಷಿತ ಸಮುದಾಯ ಬಗ್ಗೆ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎನ್ನುವ ಆರೋಪ ಜೋರಾಗಿದೆ.

ಈ ಹಿನ್ನೆಲೆಯಲ್ಲಿ ಕಲಬುರಗಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಎನ್ನುವವರು ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿರುತೆರೆ ನಟಿ ನಯನಾ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿದ್ದಾರೆ. ಶೋಷಿತ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಸದ್ಯ ದಲಿತ ಸೇನೆ ಜಿಲ್ಲಾಧ್ಯಕ್ಷರ ದೂರಿನ ಮೇರೆರೆ ನಟಿ ನಯನಾ ವಿರುದ್ಧ ಜಾತಿ ನಿಂದನೆ ಕಾಯ್ದೆ ಅಡಿ ಎಫ್‌ಐಆರ್ ದಾಖಲಾಗಿದೆ.













