
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲಾಗಿದೆ. ಮೈಸೂರಿನ ಕೃಷ್ಣರಾಜ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ದೂರು ದಾಖಲು ಮಾಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿ, ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ ದೂರು ಸಲ್ಲಿಸಿದ್ದು FIR ಆಗಿದೆ.

ಚಾಮುಂಡಿ ಬೆಟ್ಟದಲ್ಲಿ ಸೀರೆಗಳನ್ನ ತೆಗೆದುಕೊಂಡು ಹೋಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಸೀರೆಗಳ ಬಂಡಲ್ ತೆಗೆದುಕೊಂಡು ಮನೆಗೆ ಹೋಗಿದ್ದರು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಕೆ.ಆರ್.ಠಾಣಾ ಪೊಲೀಸರು ದೂರು ಸ್ವೀಕರಿಸಲು ಸಾಧ್ಯವಿಲ್ಲ ಎಂದಿದ್ದರು.ಈ ಬಗ್ಗೆ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ನೀಡಿದ್ದರು.
ಆ ಬಳಿಕ ಕಾರ್ಯದರ್ಶಿ ರೂಪಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿ, ವಿಡಿಯೋದಲ್ಲಿ ಇರುವುದು ಸೀರೆಗಳಲ್ಲ ಅದು ಫೈಲ್ ಗಳು ಎಂದಿದ್ದರು. ಸ್ನೇಹಮಯಿ ಕೃಷ್ಣ ಅವರ ಆರೋಪದ ಹಿನ್ನೆಲೆಯಲ್ಲಿ ರೂಪಾ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರತಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.









