ಬೆಂಗಳೂರು : ಸರ್ಕಾರಿ ಕಾರನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ನಟಿ ತಾರಾ ಅನುರಾಧಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ತಾರಾ ಅನುರಾಧ ಸರ್ಕಾರಿ ವಾಹನವನ್ನು ವೈಯಕ್ತಿಕ ಕಾರ್ಯಕ್ಕೆ ಬಳಕೆ ಮಾಡುತ್ತಿದ್ದ ಬಗ್ಗೆ ವಿಡಿಯೋ ಮಾಡಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಮಾತ್ರವಲ್ಲದೇ ನಟಿ ತಾರಾ ಅನುರಾಧಾ ವಿರುದ್ಧ ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಈ ವಿಡಿಯೋ ವೈರಲ್ ಆದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ದೂರು ದಾಖಲಿಸಿದೆ. ಇಂದು ತಾರಾ ಅನುರಾಧ ಮನೆಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಾರು ತಾರಾ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.