2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್,(CONGRESS) ಜೆಡಿಎಸ್(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ರಾಜಕೀಯ ನಾಯಕರ ನಡುವೆ ವಾಕ್ಸಮರವೂ ಕೂಡ ಮುಂದುವರಿದೆದೆ. ಕೆಲವರು ಆತುರದಲ್ಲಿ ಹೇಳಿಕೆ ಕೊಟ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ.
ಈ ಹಿಂದೆ ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ(Umashree) ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ಏಪ್ರಿಲ್ 28ರಂದು ಮಸ್ಕಿ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ʻಬಿಜೆಪಿ ಮುಖಂಡರು ವಿಷ ಜಂತುಗಳು ಅಂತ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಮುಖಂಡರು ಧರ್ಮವನ್ನು ಒಡೆದು, ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವಂಥವರು ಎಂದು ಆರೋಪ ಮಾಡಿದ್ದರು. ಇದೇ ವಿಚಾರವಾಗಿ ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಎಫ್ಐಆರ್ ದಾಖಲಾಗಿದೆ.