• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ಐಆರ್ ದಾಖಲು

Any Mind by Any Mind
December 26, 2023
in ಕರ್ನಾಟಕ
0
ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!
Share on WhatsAppShare on FacebookShare on Telegram

ADVERTISEMENT

ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದ್ದು ಈ ಕುರಿತಾಗಿ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಯುವ ಚಿಂತಕಿ ನಜ್ಮಾ ನಜೀರ್ ಅವರು ನಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ‌ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಈ ಕೇಸ್ ಆದರಿಸಿ FIR ದಾಖಲಾಗಿದೆ.

ಸೆಕ್ಷನ್ 354, 294, 509, 506, 153(2), 295, 295 (5), 298 04 ರೀತಾ ಪ್ರಕರಣ ದಾಖಲಿಸಲಾಗಿದೆ.

ನಜ್ಮಾ ಅವರು ದಾಖಲಿಸಿರುವ ಪ್ರಕರಣದಲ್ಲಿ, ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್, “ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಾಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲೀಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್ ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್ ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್ ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು ನೀಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

Next Post

ಹೊಸ ಕರೋನಾ ತಳಿ ಆರೋಗ್ಯದ ಮೇಲೆ ಅಷ್ಟೊಂದು ಗಂಭೀರ ಪರಿಣಾಮ ಬೀರುವುದಿಲ್ಲ, ಆದರೆ ಎಚ್ಚರಿಕೆ ಇರಲಿ : ಮೈಸೂರು DHO

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಜನವರಿಯಲ್ಲಿ ಕೊರೊ‌ನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರ ಸೂಚನೆ

ಹೊಸ ಕರೋನಾ ತಳಿ ಆರೋಗ್ಯದ ಮೇಲೆ ಅಷ್ಟೊಂದು ಗಂಭೀರ ಪರಿಣಾಮ ಬೀರುವುದಿಲ್ಲ, ಆದರೆ ಎಚ್ಚರಿಕೆ ಇರಲಿ : ಮೈಸೂರು DHO

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada