ವಿರಾಟ್ ಕೊಹ್ಲಿ (Virat Kohli Ownerships) ಮಾಲೀಕತ್ವದ ಪಬ್ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು (Cubbon Park Police) ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ (NCR) ದಾಖಲಿಸಿಕೊಂಡಿದ್ದರು. ನಂತರ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ (Separate Smoking Zone) ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ (Indian Cricketer Virat Kohli Ownerships) ಮಾಲೀಕತ್ವದ ‘ಒನ್ 8 ಕಮ್ಯೂನ್’ (ONE8 COMMUNE Pub) ಪಬ್ ವಿರುದ್ಧ ಎಫ್ಐಆರ್ (FIR)ದಾಖಲಾಗಿದೆ.
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು ನಂತರ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.