ಬೆಂಗಳೂರು : ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಸಿರು ಮಾರ್ಗದಲ್ಲಿನ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆಂಕಿ, ಮಾದಾವರದಿಂದ ರೇಷ್ಮೆ ಸಂಸ್ಥೆಗೆ ಕಡೆಗೆ ತೆರಳುವ ಮಾರ್ಗದಲ್ಲಿ ಅಗ್ನಿ ಅನಾಹುತ ಕಂಡುಬಂದಿದೆ.

ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಹೇಗೆ ಬೆಂಕಿ ಹೊತ್ತಿಕೊಂಡಿತು, ಯಾವ ಕಾರಣಕ್ಕೆ ಈ ಅವಘಡ ನಡೆದಿದೆ ಎಂಬ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಹೊತ್ತಿಕೊಂಡದ್ದರ ಬಗ್ಗೆ ಬಿಎಂಆರ್‌ಸಿಎಲ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸುತ್ತಿವೆ.
ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಇಡೀ ನಿಲ್ದಾಣದಲ್ಲಿ ಹೊಗೆ ಆವರಿಸಿದ್ದು, ಸಂಪೂರ್ಣ ತನಿಖೆಯ ಬಳಿಕವೇ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದು ಗೊತ್ತಾಗಲಿದೆ..






