ಬೆಳಗಾವಿ (Belagavi) : ಬೆಳಗಾವಿ (Belagavi)ಯ ಅಂಗಡಿಯೊಂದಿರಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ (shortcircuit) ನಿಂದ ಅಗ್ನಿ ಅವಘಡ ಸಂಭವಿಸಿದೆ.
ಇಂದು ಸಂಜೆ 7 ಗಂಟೆ ಸುಮಾರಿಗೆ ಖಡೇ ಬಜಾರ್ನಲ್ಲಿರುವ ಮಿಕ್ಸರ್ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ.
![](https://pratidhvani.com/wp-content/uploads/2024/02/Screenshot_20240216-214354_X-1024x515.webp)
ಇದರಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅವಘಡದಿಂದ ಮಾಲೀಕರಿಗೆ ಸಾಕಷ್ಟು ನಷ್ಟವಾಗಿದ್ದು, ಅವರು ದುಃಖ ವ್ಯಕ್ತಪಡಿಸಿದ್ದಾರೆ.
#karnataka #belagavi #fireaccident #shortcircuit #fireinshop