ದೆಹಲಿಯ ಕರೋಲ್ ಬಾಗ್ ಗಫ್ಫಾರ್ ಶೂ ಮಾರುಕಟ್ಟೆಯಲ್ಲಿ ಬೆಳಗಿನ ಜಾವ 4:16ಕ್ಕೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 40 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.
ಮಾರುಕಟ್ಟೆಯ ಸುತ್ತ ಆವರಿಸಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಅರ್ಧ ತಾಸು ತಡವಾಗಿ ಬಂದವು ಎಂದು ತಿಳಿದು ಬಂದಿದೆ.
ಅಗ್ನಿ ಅವಘಡದಲ್ಲಿ ಸುಮಾರು 15-16 ಅಂಗಡಿಗಳಿಗೆ ಹಾನಿಯಾಗಿದ್ದು ಬೆಂಕಿಯಲ್ಲಿ ಸಿಲುಕಿದ ಒಂದೇ ಕುಟುಂಬದ ಐವರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಅತುಲ್ ಗರ್ಗ್ ತಿಳಿಸಿದ್ದಾರೆ.










